ಶಿರಸಿ: ಉತ್ತರಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಕುಮಾರ ಜೋಶಿ ನೇತೃತ್ವದಲ್ಲಿ ಆ.20 ಶುಕ್ರವಾರ ಬೆಳಿಗ್ಗೆ 10.30 ಕ್ಕೆ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರ 77 ನೇ ಹುಟ್ಟು ಹಬ್ಬದ ಅಂಗವಾಗಿ ದೇಶಭಕ್ತಿ ಗೀತೆಗಳ ಗಾಯನ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.
ಜನಮಾಧ್ಯಮ ದಿನಪತ್ರಿಕೆ ಶಿರಸಿ ಸಹ ಸಂಪಾದಕ ಶ್ರೀಧರ ಮಂಗಳೂರು ಕಾರ್ಯಕ್ರಮ ಉದ್ಘಾಟಕರಾಗಿ ಉಪಸ್ಥಿತರಿರುವರು. ಉತ್ತರ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಕುಮಾರ ಜೋಶಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಉದ್ಯಮಿ ರಮೇಶ್ ದುಭಾಷಿ, ಕಡವೆ ಶ್ರೀಪಾದ ಹೆಗಡೆ, ಶಿರಸಿ ನಗರ ಸಭೆ ಸದಸ್ಯರಾದ ಶ್ರೀಕಾಂತ ತಾರೀಬಾಗಿಲು, ಪ್ರದೀಪ್ ಶೆಟ್ಟಿ, ರೋಟರಿ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ್ ಉಪಸ್ಥಿತರಿರುವರು.
ಉದ್ಘಾಟನಾ ಕಾರ್ಯಕ್ರಮದ ನಂತರ ದೇಶಭಕ್ತಿ ಗೀತೆಗಳ ಗಾಯನ ಸ್ಪರ್ಧೆ ನಡೆಯಲಿದೆ. ನಿರ್ಣಾಯಕರಾಗಿ ಖ್ಯಾತ ಸುಗಮಸಂಗೀತ ಗಾಯಕ ರವಿ ಮೂರೂರ್, ಎಂ ಎಂ ಆಟ್ರ್ಸ್ & ಸೈನ್ಸ್ ಕಾಲೇಜು ಸಂಗೀತ ಶಿಕ್ಷಕ ಗೋಪಾಲಕೃಷ್ಣ ಹೆಗಡೆ ತಾರಗೋಡ ಹಾಗೂ ಯುವ ಗಾಯಕಿ ವಸುಧಾ ಶಾಸ್ತ್ರೀ ಸೊಂದಾ ಪಾಲ್ಗೊಳ್ಳಲಿದ್ದಾರೆ.
ಸಂಜೆ 4.00 ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ವಿತರಣೆ ಸಮಾರಂಭ ನಡೆಯಲಿದ್ದು, ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್ ಕೆ ಭಾಗವತ್, ಶಿರಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ್ ಗೌಡ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ್ ನಾಯ್ಕ್, ಬನವಾಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ ಎಫ್ ನಾಯ್ಕ್, ಹಿಂದುಳಿದವರ್ಗಗಳ ವಿಭಾಗ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ನಾಗರಾಜ ನಾರ್ವೆಕರ್, ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ವಕ್ತಾರ ದೀಪಕ್ ಹೆಗಡೆ ದೊಡ್ದುರ್, ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಎಸ್.ಎಸ್ಟಿ ವಿಭಾಗ ಅಧ್ಯಕ್ಷ ಬಸವರಾಜ್ ದೊಡ್ಮನಿ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಶೆಟ್ಟಿ, ಮಹಿಳಾ ಬ್ಲಾಕ್ ಕಾಂಗ್ರೆಸ್ ಸಿದ್ದಾಪುರ ಅಧ್ಯಕ್ಷೆ ಸೀಮಾ ಹೆಗಡೆ ಉಪಸ್ಥಿತರಿರುವರು.