Slide
Slide
Slide
previous arrow
next arrow

ಅಂಬೇಡ್ಕರ್ ನೀಡಿದ ಸಂವಿಧಾನ ವಿಶ್ವಕ್ಕೆ ಮಾದರಿ: ನ್ಯಾ. ವಿಜಯಕುಮಾರ್

300x250 AD

ಕಾರವಾರ: ಡಾ.ಬಿ.ಆರ್.ಅಂಬೇಡ್ಕರ್ ವಿಶ್ವಕ್ಕೆ ಮಾದರಿಯಾದ ಸಂವಿಧಾನವನ್ನು ನೀಡಿದ್ದು, ಆ ಮೂಲಕ ಸಮಾಜದಲ್ಲಿ ಸಮಾನತೆಯನ್ನು ತಂದಿದ್ದಾರೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಡಿ.ಎಸ್.ವಿಜಯಕುಮಾರ್ ಹೇಳಿದರು.
ಇಲ್ಲಿನ ಜಿಲ್ಲಾ ರಂಗ ಮಂದಿರದಲ್ಲಿ ಆಯೋಜಿಸಲಾಗಿದ್ದ 132ನೇ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನದ ಮೂಲಕ ಅಂಬೇಡ್ಕರ್ ಅವರು ಜಾತಿಯಿಂದ ರೋಗಗ್ರಸ್ತವಾಗಿದ್ದ ಸಮಾಜಕ್ಕೆ ಮುಕ್ತಿ ನೀಡಲು ಶ್ರಮಿಸಿದರು. ಮೀಸಲಾತಿ, ಸಮಾನತೆಯ ಹಕ್ಕು ನೀಡುವುದರ ಜೊತೆಗೆ ಜಾತಿ ವ್ಯವಸ್ಥೆಯನ್ನು ಮುಕ್ತಮಾಡಿ ಬೆಳಕಾಗಿದ್ದಾರೆ. ಅಂಬೇಡ್ಕರ್ ಅವರ ಅಗತ್ಯತೆ ಹಿಂದಿಗಿoತಲೂ ಪ್ರಸ್ತುತ ಕಾಲದಲ್ಲಿ ಹೆಚ್ಚಿದೆ. ಅಂಬೇಡ್ಕರ್ ಅವರು ನಿರಂತರ ಅಧ್ಯಯನದ ಮೂಲಕ ಎಲ್ಲ ಕ್ಷೇತ್ರಗಳಲ್ಲಿಯೂ ಅತೀ ಹೆಚ್ಚಿನ ಪ್ರಬುದ್ಧತೆ ಹೊಂದಿದ್ದರು. ಈ ಪ್ರಬುದ್ಧತೆಯ ಆಧಾರದಲ್ಲಿಯೇ ಅಂಬೇಡ್ಕರ್ ಅವರು ತಮ್ಮ ಬರಹಗಳ ಮೂಲಕ ಇಂದಿಗೂ ಜೀವಿಸುತ್ತಿದ್ದಾರೆ ಎಂದರು.
ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾತನಾಡಿ, ಜಯಂತಿಗಳು ವೈಚಾರಿಕತೆಯ ಆಚರಣೆಯಾಗಬೇಕು. ಜೀವನದಲ್ಲಿ ಮಹತ್ವದ ಮೂರು ವ್ಯಕ್ತಿತ್ವಗಳಾದ ಬುದ್ಧ ವೈಚಾರಿಕ ಕ್ರಾಂತಿ, ಬಸವಣ್ಣನವರ ಸಾಮಾಜಿಕ ಕ್ರಾಂತಿ ಹಾಗೂ ಅಂಬೇಡ್ಕರ್ ಅವರ ಸಮಾನತೆಯ ಕ್ರಾಂತಿಯ ತತ್ವಗಳನ್ನ ಅಳವಡಿಸಿಕೊಳ್ಳಬೇಕು. ಅಂಬೇಡ್ಕರ್ ಅವರು ಶೈಕ್ಷಣಿಕ ಶಕ್ತಿಯಿಂದ ಸಾಮಾಜಿಕ, ರಾಜಿಕೀಯ ಹಾಗೂ ಆರ್ಥಿಕ ಕ್ಷೆರತ್ರದಲ್ಲಿ ಮಹತ್ತರ ಬದಲಾವಣೆ ತರುವ ಮೂಲಕ ಬುಹುದೊಡ್ಡ ಕ್ರಾಂತಿಯನ್ನ ಮಾಡಿದ್ದಾರೆ. ಹೀಗಾಗಿ ಇಂತಹ ಮಹನಿಯರನ್ನ ಕೇವಲ ಒಂದು ಸಮುದಾಯಕ್ಕೆ ಸೀಮಿತ ಮಾಡದೆ ಒಂದೇ ಭಾವನೆಯಿಂದ ಕಾಣುವ ಅಗತ್ಯವಿದೆ ಎಂದರು.
ಡಾ.ಬಿ.ಆರ್.ಅoಬೇಡ್ಕರ್ ಸಮುದಾಯ ಪ್ರಗತಿ ಸಂಘದ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಚಂದ್ರಪ್ಪ ಬಕಾಯಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನರಾಮ್ ರವರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮಕ್ಕೂ ಪೂರ್ವದಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಅಂಬೇಡ್ಕರ್ ಮತ್ತು ಜಗಜೀವನ್ ರಾಮರವರ ಭಾವಚಿತ್ರವಿರುವ ರಥ ಯಾತ್ರೆಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ರೇಣುಕಾ ರಾಯ್ಕರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಖಂಡೂ, ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಐಎಎಸ್ ಪ್ರೊಬೆಶನರಿ ಅಧಿಕಾರಿ ಜುಬಿನ್ ಮಹಪಾತ್ರ, ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಪಿ.ಹೇಮಲತಾ, ತಹಶೀಲ್ದಾರ ಬಿ.ಜಿ.ಶ್ರೀನಿವಾಸ ಪ್ರಸಾದ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ರಾಮಚಂದ್ರ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top