• Slide
    Slide
    Slide
    previous arrow
    next arrow
  • ನಾಳೆ ಹಣತೆ ಅಂಕೋಲಾ ಘಟಕ ಉದ್ಘಾಟನೆ

    300x250 AD

    ಅಂಕೋಲಾ: ‘ಹಣತೆ’ ಸಾಹಿತ್ಯಕ, ಸಾಂಸ್ಕೃತಿಕ ಜಗಲಿ ಅಂಕೋಲಾ ತಾಲೂಕು ಘಟಕದ ನೂನತ ಕಾರ್ಯಕಾರಿ ಸಮಿತಿ ಕಾರ್ಯಚಟುವಟಿಕೆಯ ಉದ್ಘಾಟನಾ ಕಾರ್ಯಕ್ರಮ ಏ.16ರಂದು ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಕೆ.ಎಲ್.ಇ. ಕಾಲೇಜಿನ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಣತೆ ಜಿಲ್ಲಾಧ್ಯಕ್ಷ ಅರವಿಂದ ಕರ್ಕಿಕೋಡಿ ವಹಿಸಲಿದ್ದು, ನಿವೃತ್ತ ಪ್ರಾಧ್ಯಾಪಕ ಡಾ.ಎಂ.ಡಿ.ನಾಯ್ಕ ಹನೆಹಳ್ಳಿ ಅವರು ಹಣತೆ ಬೆಳಗಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಅಂಕೋಲಾ ಜಿ.ಸಿ. ಕಾಲೇಜಿನ ಪ್ರಾಚಾರ್ಯ ಡಾ.ಸಿದ್ದಲಿಂಗಸ್ವಾಮಿ ವಸ್ತ್ರದ, ಕೆ.ಎಲ್.ಇ. ಕಾಲೇಜಿನ ಪ್ರಾಚಾರ್ಯ ಡಾ.ವಿನಾಯಕ ಜಿ.ಹೆಗಡೆ, ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಅರ್ಚನಾ ನಾಯ್ಕ ಪಾಲ್ಗೊಳ್ಳಲಿದ್ದಾರೆ.
    ಹಣತೆ ಜಿಲ್ಲಾ ಪ್ರಧಾನ ಸಂಚಾಲಕ ಎನ್.ಜಯಚಂದ್ರನ್, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಡಾ. ಪ್ರಕಾಶ ನಾಯಕ ಬೆಳಸೆ, ದಾಮೋದರ ನಾಯ್ಕ ಹಣತೆ ಕಾರವಾರ ಘಟಕದ ಅಧ್ಯಕ್ಷ ನಾಗರಾಜ ಹರಪನಳ್ಳಿ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅರುಣ ಶೆಟ್ಟಿ, ತಾಲೂಕು ಕಲಾವಿದರ ಸಂಘದ ಅಧ್ಯಕ್ಷ ನಾಗರಾಜ ಜಾಂಬ್ಲೇಕರ್ ಅವರು ಗೌರವ ಉಪಸ್ಥಿತರಿರಲಿದ್ದಾರೆ ಎಂದು ಹಣತೆ ತಾಲೂಕು ಘಟಕದ ಅಧ್ಯಕ್ಷ ಅಕ್ಷಯ ಶ್ರೀಪಾದ ನಾಯ್ಕ ಬೊಬ್ರುವಾಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top