Slide
Slide
Slide
previous arrow
next arrow

ಭಾಜಪಾ ಜಿಲ್ಲಾ ಮಾಹಿತಿ ಕೇಂದ್ರ ಉದ್ಘಾಟನೆ

300x250 AD

ಶಿರಸಿ: ಇಲ್ಲಿನ ಪಂಡಿತ್ ದೀನ್ ದಯಾಳ್ ಸಭಾಭವನದಲ್ಲಿ ಭಾರತೀಯ ಜನತಾ ಪಾರ್ಟಿ ಉತ್ತರ ಕನ್ನಡ ಜಿಲ್ಲಾ ಮಾಹಿತಿ ಕೇಂದ್ರ ಉದ್ಘಾಟನೆಯನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಅವರು ಜಿಲ್ಲಾ ಮಾಹಿತಿ ಕೇಂದ್ರದ ಪ್ರಮುಖರಿಗೆ ತಮ್ಮ ಜವಾಬ್ದಾರಿಗಳನ್ನು ತಿಳಿಸಿಕೊಟ್ಟರು ಮತ್ತು ಎಲ್ಲರೂ ಸಕ್ರಿಯವಾಗಿ ಕಾರ್ಯನಿರ್ವಹಿಸಿ ಬಿಜೆಪಿ ಪಕ್ಷದ ಗೆಲುವಿಗೆ ಶ್ರಮಿಸುವಂತೆ ಸೂಚಿಸಿದರು. ಈ ಕಾರ್ಯಕ್ರಮದಲ್ಲಿ ಶಿರಸಿ ನಗರ ಮಂಡಲ ಅಧ್ಯಕ್ಷರು ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಶಿರಸಿ ಮಹಿಳಾ ಮೋರ್ಚಾ ಅಧ್ಯಕ್ಷರು ಪದಾಧಿಕಾರಿಗಳು, ಶಿರಸಿ ನಗರ ಸಭೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಶಿರಸಿ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರು, ನಗರಸಭಾ ಸದಸ್ಯರು,ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರು, ಪದಾಧಿಕಾರಿಗಳು, ಯುವ ಮೋರ್ಚಾ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top