Slide
Slide
Slide
previous arrow
next arrow

ಶಿರಸಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಭೀಮಣ್ಣ ನಾಯ್ಕ್

300x250 AD

ಶಿರಸಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿಂದ‌ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದ್ದು, ಇಂದು ಶಿರಸಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ‌ ನಾಯ್ಕ್ ನಾಮಪತ್ರ ಸಲ್ಲಿಸಿದ್ದಾರೆ.

ಇಲ್ಲಿನ‌ ಮಾರಿಕಾಂಬಾ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಸಾಗಿ ಉಪವಿಭಾಗಾಧಿಕಾರಿ ಕಛೇರಿಗೆ ತೆರಳಿ ಉಪವಿಭಾಗಾಧಿಕಾರಿ ದೇವರಾಜ್ ಆರ್.ಅವರಿಗೆ ನಾಮಪತ್ರ ಸಲ್ಲಿಸಿದರು.

ಕ್ಷೇತ್ರದ ಮೂಲೆ ಮೂಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ, ಮೆರವಣಿಗೆಯಲ್ಲಿ ಪಾಲ್ಗೊಂಡ ಪಕ್ಷದ ಕಾರ್ಯಕರ್ತರು
ಅಭ್ಯರ್ಥಿಗಳ ಪರವಾಗಿ‌ ಘೋಷಣೆ ಕೂಗಿದರು.

300x250 AD

ಈ ವೇಳೆ ವಸಂತ ನಾಯ್ಕ, ರವೀಂದ್ರ ‌ನಾಯ್ಕ, ಜಿ.ಎನ್. ಹೆಗಡೆ ಮುರೇಗಾರ, ಎಂ.ಎನ್‌. ನಾಯ್ಕ‌ ಹಾಗೂ ಭೀಮಣ್ಣ ಪತ್ನಿ‌ ಸಾಥ್ ನೀಡಿದರು.

Share This
300x250 AD
300x250 AD
300x250 AD
Back to top