Slide
Slide
Slide
previous arrow
next arrow

ಭವ್ಯ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ

300x250 AD

ಶಿರಸಿ: ರಾಜ್ಯ ವಿಧಾನಸಭಾ ಚುನಾವಣೆಗೆ ಶಿರಸಿ-ಸಿದ್ದಾಪುರ ಕ್ಷೇತ್ರದಿಂದ ಹಾಲಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಮಂಗಳವಾರ ಶಿರಸಿಯಲ್ಲಿ ನಾಮಪತ್ರ ಸಲ್ಲಿಸಿದರು.

ಸಹಸ್ರಾರು ಸಂಖ್ಯೆಯಲ್ಲಿ ಅಪಾರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು, ಹಿರಿಯರ ಉಪಸ್ಥಿತಿಯಲ್ಲಿ ಶ್ರೀ ಮಾರಿಕಾಂಬಾ ದೇವಿಗೆ ಪೂಜೆ ಸಲ್ಲಿಸಿ, ಭವ್ಯ ಮೆರವಣಿಗೆಯಲ್ಲಿ ಸಾಗಿ, ಸಹಾಯಕ ಆಯುಕ್ತರ ಕಛೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಯುವ ಧುರೀಣ ಶಶಿಭೂಷಣ ಹೆಗಡೆ ದೊಡ್ಮನೆ, ಶಿರಸಿ ನಗರ ಘಟಕಾಧ್ಯಕ್ಷ ರಾಜು ಶೆಟ್ಟಿ, ಗ್ರಾಮೀಣ ಘಟಕಾಧ್ಯಕ್ಷ ನರಸಿಂಹ ಹೆಗಡೆ ಸೇರಿದಂತೆ ಇನ್ನಿತರರು ಇದ್ದರು.

300x250 AD
Share This
300x250 AD
300x250 AD
300x250 AD
Back to top