Slide
Slide
Slide
previous arrow
next arrow

ಬಿ.ಎಡ್ ಕಾಲೇಜಿನಲ್ಲಿ ನೂತನ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

300x250 AD

ದಾಂಡೇಲಿ: ಕೆನರಾ ವೆಲ್ಪೇರ್ ಟ್ರಸ್ಟಿನ ನಗರದಲ್ಲಿರುವ ಬಿ.ಎಡ್ ಕಾಲೇಜಿನಲ್ಲಿ ನೂತನ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ನೂತನ ಸಾಲಿನ ಬಿ.ಎಡ್ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳ ಸ್ವಾಗತ ಕಾರ‍್ಯಕ್ರಮವು ಕಾಲೇಜಿನಲ್ಲಿ ನಡೆಯಿತು.

ಕಾರ‍್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಿವೃತ್ತ ಪ್ರಾಚಾರ್ಯರಾದ ಪಿ.ವಿ.ಹೆಗಡೆ ಬಿ.ಎಡ್ ಶಿಕ್ಷಣವನ್ನು ಪಡೆಯುತ್ತಿರುವ ವಿದ್ಯಾರ್ಥಿಗಳು ಮುಂದೆ ಶಿಕ್ಷಕರಾಗಿ ಅತ್ಯಂತ ಕಾಳಜಿ ಮತ್ತು ಬದ್ಧತೆಯಿಂದ ಕಾರ‍್ಯನಿರ್ವಹಿಸಬೇಕು. ಯೋಗ್ಯ ಶಿಕ್ಷಕನಿಂದ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲು ಸಾಧ್ಯವಿದೆ. ಇದನ್ನು ಬಿ.ಎಡ್ ಪ್ರಶಿಕ್ಷಣಾರ್ಥಿಗಳು ಮನದಲ್ಲಿಟ್ಟು ಅಧ್ಯಯನದಲ್ಲಿ ತೊಡಗಿಕೊಳ್ಳಬೇಕೆಂದು ಕರೆ ನೀಡಿದರು.

300x250 AD

ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಜನತಾ ವಿದ್ಯಾಲಯ ಸಂಯುಕ್ತ ಪದವಿ ಪೂರ್ವ ವಿದ್ಯಾಲಯದ ಪ್ರಾಚಾರ್ಯರಾದ ಎಂ.ಎಸ್.ಇಟಗಿ, ನಮ್ಮ ಸಂಸ್ಥೆಯ ಈ ಶಿಕ್ಷಣ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಬಿ.ಎಡ್ ಶಿಕ್ಷಣ ಪ್ರಶಿಕ್ಷಣಾರ್ಥಿಗಳ ಜೀವನ ಸುಧಾರಣೆಯ ಜೊತೆಗೆ ಆದರ್ಶ ಸಮಾಜ ನಿರ್ಮಾಣಕ್ಕೆ ನೆರವಾಗುವಂತಹ ಶೈಕ್ಷಣಿಕ ವ್ಯವಸ್ಥೆ ಇದಾಗಿದೆ ಎಂದರು.
ಕೆನರಾ ವೆಲ್ಪೇರ್ ಟ್ರಸ್ಟಿನ ಬಿ.ಎಡ್ ಕಾಲೇಜಿನ ಪ್ರಾಚಾರ್ಯೆ ಸಹನಾ ಸೂರ‍್ಯವಂಶಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡವ ಮೂಲಕ ನಮ್ಮ ಶಿಕ್ಷಣ ಸಂಸ್ಥೆಗೆ ತನ್ನದೇ ಆದ ಗೌರವವನ್ನು ಸಂಪಾದಿಸಿಕೊಂಡಿದೆ. ಇಲ್ಲಿ ಕಲಿತ ಶಿಕ್ಷಣ ತಮ್ಮ ಬದುಕಿನ ಜೊತೆಗೆ ಸದೃಢ ಸಮಾಜ ನಿರ್ಮಾಣಕ್ಕೆ ಬಳಕೆಯಾದಾಗ ಮಾತ್ರ ಬಿ.ಎಡ್ ಪದವಿ ಪಡೆದಿರುವುದಕ್ಕೆ ಸಾರ್ಥಕವಾಗುತ್ತದೆ ಎಂದರು.
ಪ್ರಶಿಕ್ಷಣಾರ್ಥಿ ಮೀನಾಕ್ಷಿ ಪಾರ್ಥಿಸಿದರು. ಉಪನ್ಯಾಸಕರುಗಳಾದ ನಾಗೇಶ ನಾಯ್ಕ ಸ್ವಾಗತಿಸಿದರು. ದೀಪಾ ನಾಯ್ಕ ಅತಿಥಿಗಳನ್ನು ಪರಿಚಯಿಸಿದರು. ವಾಣಿ ರಾಜು ರುದ್ರಪಾಟಿ ವಂದಿಸಿದರು, ನೀಲಕಂಠ ನಾಯ್ಕ ಅವರು ಕಾರ‍್ಯಕ್ರಮವನ್ನು ನಿರೂಪಿಸಿದರು.

Share This
300x250 AD
300x250 AD
300x250 AD
Back to top