ಬೆಂಗಳೂರು: ಇಂದು ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಒಟ್ಟು 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಉಡುಪಿ ಜಿಲ್ಲೆಗೆ 2ನೇ ಸ್ಥಾನ ಲಭಿಸಿದೆ. ಕೊಡಗು 3, ಉತ್ತರ ಕನ್ನಡ 4, ಯಾದಗಿರಿ ಕೊನೆಯ ಸ್ಥಾನದಲ್ಲಿದೆ. karresults.nic.in ನಲ್ಲಿ ಫಲಿತಾಂಶ ನೋಡಬಹುದು.
- ಪರೀಕ್ಷೆಗೆ ನೋಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆ: 727,923
- ಪರೀಕ್ಷೆಗೆ ಅರ್ಹರಾಗಿರುವ ವಿದ್ಯಾರ್ಥಿಗಳ ಸಂಖ್ಯೆ: 725,821
- ಎಲ್ಲಾ ವಿಷಯಗಳಲ್ಲಿ ಗೈರುಹಾಜರಾದ ವಿದ್ಯಾರ್ಥಿಗಳ ಸಂಖ್ಯೆ: 23,754
- ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಸಂಖ್ಯೆ: 702,067
- ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆ: 524,209