• Slide
  Slide
  Slide
  previous arrow
  next arrow
 • ‘ನಾಸಾ’ದ ಪ್ರಶಸ್ತಿಗೆ ಆಯ್ಕೆಯಾದ ಜಿಲ್ಲೆಯ ಯುವ ಪ್ರತಿಭೆ

  300x250 AD

  ಅಮೇರಿಕಾದ ಪ್ರತಿಷ್ಟಿತ ಬಾಹ್ಯಾಕಾಶ ಸಂಸ್ಥೆಯಾದ ‘ನಾಸಾ’ ದಿಂದ ಕೊಡಮಾಡುವ ‘ಫ಼್ಯೂಚರ್ ಇನ್ವೆಸ್ಟಿಗೇಟರ್’ ಪ್ರಶಸ್ತಿಗೆ ಜಿಲ್ಲೆಯ ಯುವ ಪ್ರತಿಭೆ ದಿನೇಶ ಹೆಗಡೆ ಆಯ್ಕೆಯಾಗಿದ್ದಾರೆ.

  ಜಿಲ್ಲೆಯ ಸಿದ್ದಾಪುರ ತಾಲೂಕಿನ ಸಶಿಗುಳಿ ಗ್ರಾಮದವರಾದ ದಿನೇಶ ಹೆಗಡೆ ನಾಸಾದ ಸಂಶೋಧನಾ ಪ್ರಶಸ್ತಿ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಅವರು ಅಮೇರಿಕಾದ ಅಲಬಾಮಾ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್ ಅಧ್ಯಯನ ಮಾಡುತ್ತಿದ್ದಾರೆ.

  ಯು.ಎ.ಎಚ್.ಸೆಂಟರ್ ಫ಼ಾರ್ ಸ್ಪೇಸ್ ಪ್ಲಾಸ್ಮಾ ಮತ್ತು ಏರೋನಾಮಿಕ್ ರಿಸರ್ಚ್’ ನ ಬಾಹ್ಯಾಕಾಶ ವಿಭಾಗದಲ್ಲಿ ಪದವಿ ಸಂಶೋಧನಾ ಸಹಾಯಕರಾಗಿಯೂ ಅವರು ಕೆಲಸ ಮಾಡುತ್ತಿದ್ದಾರೆ.

  ದಿನೇಶ ಹೆಗಡೆ ಹಾಗು ಕ್ಯಾಥರೀನ್ ಡೆವಿಡ್ಸನ್ ಎಂಬುವವರೊಂದಿಗೆ ಸಲ್ಲಿಸಿರುವ ‘ಬಾಹ್ಯಾಕಾಶ ಹವಾಮಾನದ ಅನಿಶ್ಚಿತತೆಗಳ ಪರಿಮಾಣಾತ್ಮಕ ಅಧ್ಯಯನ’ ವಿಷಯದ ಕುರಿತಾದ ಸಂಶೋಧನಾ ಪ್ರಸ್ತಾವನೆಗೆ ತಲಾ 1ಕೋಟಿ 42 ಸಾವಿರ (1,35,000 ಅಮೇರಿಕನ್ ಡಾಲರ್ ) ವಿದ್ಯಾರ್ಥಿವೇತನವನ್ನು ಪಡೆಯಲಿದ್ದಾರೆ.ಅವರು ಬಾಹ್ಯಾಕಾಶ ಹವಾಮಾನದ ಕುರಿತು ಅಧ್ಯಯನ ನಡೆಸಲು ಈ ಅನುದಾನ ನೀಡಲಾಗಿದೆ.

  300x250 AD

  ಸಿದ್ದಾಪುರ ತಾಲೂಕಿನ ವಾಜಗದ್ದೆ ಸರ್ಕಾರಿ ಶಾಲೆಯಲ್ಲಿ ಹಾಗೂ ಹಾರ್ಸಿಕಟ್ಟಾದ ಪ್ರೌಢಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದಿರುವ ಅವರು ಮೈಸೂರಿನ ಯುವರಾಜ ಕಾಲೇಜಿನಲ್ಲಿ ಬಿಎಸ್ಸಿ ಹಾಗೂ ಮೈಸೂರು ವಿವಿಯಿಂದ ಭೌತಶಾಸ್ತ್ರದಲ್ಲಿ ಎಂಎಸ್ಸಿ ಪಡೆದಿದ್ದಾರೆ.

  ಆ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಅವರು ಜಿಲ್ಲೆಯ ಹಾಗೂ ಕನ್ನಡನಾಡಿನ ಕೀರ್ತಿ ಪತಾಕೆ ಯನ್ನು ಉತ್ತುಂಗಕ್ಕೆರಿಸಿದ್ದಾರೆ.

  Share This
  300x250 AD
  300x250 AD
  300x250 AD
  Leaderboard Ad
  Back to top