Slide
Slide
Slide
previous arrow
next arrow

ದ್ವಿಚಕ್ರ ವಾಹನ ಡಿಕ್ಕಿ; ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

300x250 AD

ದಾಂಡೇಲಿ: ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರಿಗೆ ಅತೀ ವೇಗವಾಗಿ ಬಂದ ದ್ವಿಚಕ್ರ ವಾಹನವೊಂದು ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದ ಬಗ್ಗೆ ಶುಕ್ರವಾರ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ.
ಸ್ಥಳೀಯ ಹಾಲಮಡ್ಡಿ ನಿವಾಸಿ, ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ನಿವೃತ್ತ ಕಾರ್ಮಿಕ ಹಾಗೂ ಸ್ಥಳೀಯ ಬಸವೇಶ್ವರ ಮಂದಿರದ ಅರ್ಚಕರಾಗಿದ್ದ ಬಸಯ್ಯಾ ದಾನಯ್ಯನವರ ಎಂಬವರೆ ಮೃತಪಟ್ಟ ದುರ್ದೇವ್ಯಿಯಾಗಿದ್ದಾರೆ. ಮೃತರಿಗೆ 62 ವರ್ಷ ವಯಸ್ಸಾಗಿತ್ತು. ಇವರು ಗುರುವಾರ ಮಧ್ಯಾಹ್ನ 3.30 ಗಂಟೆಗೆ ಹಾಲಮಡ್ಡಿಯಲ್ಲಿರುವ ತನ್ನ ಗೂಡಂಗಡಿಯ ಮುಂದೆ ನಿಂತುಕೊಂಡಿದ್ದ ಸಂದರ್ಭದಲ್ಲಿ ಅತೀಯಾದ ವೇಗವಾಗಿ ಬಂದ ಕೆಎ: 24, ಡಬ್ಲೂ: 8020 ಸಂಖ್ಯೆಯ ದ್ವಿಚಕ್ರ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಬಸಯ್ಯಾ ಕಲ್ಲಯ್ಯಾ ದಾನಯ್ಯನವರ ಅವರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ಬಸಯ್ಯಾ ಅವರನ್ನು ತಕ್ಷಣವೆ ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಅಂತಿಮವಾಗಿ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ತಡರಾತ್ರಿ ಬಸಯ್ಯಾ ಕಲ್ಲಯ್ಯಾ ದಾನಯ್ಯನವರ ನಿಧನರಾಗಿದ್ದಾರೆ. ದ್ವಿಚಕ್ರ ವಾಹನ ಸವಾರ ಜೋಯಿಡಾ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ರಿಯಾಜ್ ಅಹ್ಮದ್ ಚಾಂದಸಾಬ್ ಬೇವೂರ್ ಎಂದು ತಿಳಿದುಬಂದಿದೆ. ಈ ಬಗ್ಗೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top