ಗೋಕರ್ಣ: ಜೆಡಿಎಸ್ ಅಭ್ಯರ್ಥಿ ಸೂರಜ ನಾಯ್ಕ ಸೋನಿ ತಮ್ಮ ಪತ್ನಿಯೊಂದಿಗೆ ಗೋಕರ್ಣದ ಅಶೋಕೆಗೆ ಆಗಮಿಸಿ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಈ ಬಾರಿ ಗೆಲ್ಲಲೇಬೇಕೆಂದು ಹಠ ತೊಟ್ಟಿರುವ ಸೂರಜ ನಾಯ್ಕ ಇಡೀ ಕ್ಷೇತ್ರವನ್ನು ಸುತ್ತಾಡಿ ಪ್ರಚಾರ ನಡೆಸುತ್ತಿದ್ದಾರೆ. ಹಾಗೇ ಹಿರಿಯ ವ್ಯಕ್ತಿಗಳನ್ನು ಮತ್ತು ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಈ ಬಾರಿ ಜೆಡಿಎಸ್‌ನಿಂದ ಕಣಕ್ಕಿಳಿದಿರುವ ಇವರು ತಮ್ಮ ಗೆಲುವನ್ನು ಗಿಟ್ಟಿಸಿಕೊಳ್ಳಲು ಸಕಲ ಪ್ರಯತ್ನ ಮಾಡುತ್ತಿದ್ದಾರೆ.
ಜೆಡಿಎಸ್ ಮತ್ತು ಬಿಜೆಪಿಯಲ್ಲಿ ಬಂಡಾಯ ಇಲ್ಲದಿರುವುದರಿಂದ ಈ ಎರಡು ಪಕ್ಷದಲ್ಲಿ ಗುರುತಿಸಿಕೊಂಡವರು ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಕಾಂಗ್ರೆಸ್‌ನಲ್ಲಿ ಮಾತ್ರ ಕಾರ್ಯಕರ್ತರು ಮತ್ತು ಮುಖಂಡರಲ್ಲಿ ತೀವ್ರ ಗೊಂದಲಮಯವಾಗಿದ್ದು, ಯಾರ ಜತೆ ಗುರುತಿಸಿಕೊಳ್ಳಬೇಕು ಎನ್ನುವುದೇ ತಿಳಿಯದಾಗಿದೆ. ತಮ್ಮ ಮಠಕ್ಕೆ ಆಗಮಿಸಿದ ಸೂರಜ ನಾಯ್ಕ ಮತ್ತು ಅವರ ಪತ್ನಿ ವೀಣಾ ನಾಯ್ಕ ಅವರನ್ನು ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು ಗೌರವಿಸಿದರು.
ರಾಘವೇಶ್ವರ ಶ್ರೀಗಳ ಆಶೀರ್ವಾದ ಪಡೆದ ಜೆಡಿಎಸ್ ಅಭ್ಯರ್ಥಿ
