ನವದೆಹಲಿ: ಅಂತರರಾಷ್ಟ್ರೀಯ ಮಟ್ಟದಲ್ಲಿ ಅಫ್ಘಾನಿಸ್ಥಾನದಲ್ಲಿರುವ ಭಾರತೀಯರ ರಕ್ಷಣೆಗೆ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ತಿಳಿಸಿದ್ದಾರೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಫ್ಘಾನಿಸ್ಥಾನದ ಜೊತೆಗೆ ಭಾರತವು ಐತಿಹಾಸಿಕ ಸಂಬಂಧ ಹೊಂದಿದೆ. ಅದು ತನ್ನ ಆಲೋಚನೆಗಳು, ದೃಷ್ಟಿಕೋನಗಳಿಗೆ ಸಂಬಂಧಿಸಿದಂತೆ ಮಾರ್ಗದರ್ಶನ ನೀಡುವುದನ್ನು ಮುಂದುವರಿಸಲಿರುವುದಾಗಿಯೂ ಅವರು ಹೇಳಿದರು.
ಪ್ರಸ್ತುತ ಅಫ್ಘಾನಿಸ್ಥಾನದಲ್ಲಿನ ಸಮಸ್ಯೆಗಳ ಬಗ್ಗೆ ನಾವು ಗಮನ ಹರಿಸಿದ್ದೇವೆ. ಅಫ್ಘಾನಿಸ್ಥಾನದಲ್ಲಿರುವ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಮತ್ತೆ ದೇಶಕ್ಕೆ ಕರೆತರುವುದು ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಪಾಲುದಾರರ ಜೊತೆಗೆ ಕಾರ್ಯ ನಿರ್ವಹಿಸುತ್ತಿದ್ದೇವೆ. ನಮಗೆ ಸದ್ಯದ ಮಟ್ಟಿಗೆ ಭಾರತೀಯರನ್ನು ಸ್ವದೇಶಕ್ಕೆ ಮರಳುವಂತೆ ಮಾಡುವುದೇ ಮುಖ್ಯ ಕೆಲಸವಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13