ಕುಮಟಾ: ತಾಲೂಕಿನ ಗೋರೆಯ ಕೆನರಾ ಎಕ್ಸಲೆನ್ಸ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 100ರಷ್ಟು ಸಾಧನೆ ಮಾಡಿದ್ದಾರೆ.
ಜಿ.ಎನ್.ಹೆಗಡೆ ಟ್ರಸ್ಟ್ ವತಿಯಿಂದ ನಡೆಸಲ್ಪಡುವ ಈ ಕಾಲೇಜಿನ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿಗಳು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಡಿಸ್ಟಿಂಕ್ಷನ್ ಹಾಗೂ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ಶೇಕಡಾ ನೂರರಷ್ಟು ಫಲಿತಾಂಶ ದಾಖಲಿಸಿ ಅಮೋಘ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ವೈಶಾಲಿ ಭಟ್ಟ 97% ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಸಮರ್ಥ ಹೆಗಡೆ ಶೇ 92.5 ದ್ವಿತೀಯ ಸ್ಥಾನ ಪಡೆದರೆ, ರಕ್ಷಿತಾ ಹೆಗಡೆ ಶೇ 89.8 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶ್ರೀನಿಧಿ ಹೆಗಡೆ ಶೇ 93.8, ಧನ್ಯಾ ದೇವಾಡಿಗ ಶೇ 90, ರೋಹನ ಗುನಗಾ ಶೇ 87.5 ಅಂಕ ಪಡೆಯುವ ಮೂಲಕ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಸಂಸ್ಥೆಗೆ ಕೀರ್ತಿ ತಂದಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಜಿ.ಜಿ.ಹೆಗಡೆ ಮತ್ತು ಪ್ರಾಚಾರ್ಯ ಡಿ.ಎನ್.ಭಟ್ಟ, ಆಡಳಿತ ಮಂಡಳಿಯ ಪದಾಧಿಕಾರಿಗಳು, ಉಪನ್ಯಾಸಕ ಹಾಗೂ ಪಾಳಕ ವೃಂದದವರು ವಿದ್ಯಾರ್ಥಿಗಳ ಈ ಅಮೋಘ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.