ಹೊನ್ನಾವರ: 2022- 2023ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ನಗರದ ಮಲ್ನಾಡ್ ಪ್ರೊಗ್ರೆಸ್ಸಿವ್ ಎಜ್ಯುಕೇಶನ್ ಸೊಸೈಟಿಯ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು ಗಣನೀಯ ಸಾಧನೆಯನ್ನು ಮಾಡಿದೆ.
ವಿಜ್ಞಾನ ವಿಭಾಗದಲ್ಲಿ ಶೇ. 99.32ರಷ್ಟು ವಿದ್ಯಾರ್ಥಿಗಳು ತೇರ್ಗಡೆಯನ್ನು ಹೊಂದಿದ್ದಾರೆ. ಅನೀಷಾ ಡಿಸೋಜಾ ಶೇ 96, ರಂಜಿತಾ ಶಾನಭಾಗ್ ಶೇ. 96 ಅಂಕ ಪಡೆದು ಪ್ರಥಮ ಸ್ಥಾನ, ಸಂಜನಾ ಕಮಲಾಕರ ಶೇಟ್ ಶೇ. 95.83 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಹಾಗೂ ದಿಶಾ ಶಿರ್ಸಿಕರ್ ಶೇ. 95.17, ಶ್ರೀಲಕ್ಷ್ಮಿ ಹೆಗಡೆ ಶೇ 95.17 ಅಂಕಗಳೊಂದಿಗೆ ತೃತೀಯ ಸ್ಥಾನವನ್ನು ಪಡೆದಿದ್ದಾರೆ.
ಕಲಾ ವಿಭಾಗದಲ್ಲಿಯೂ ಕಾಲೇಜು ಉತ್ತಮ ಸಾಧನೆಯನ್ನು ತೋರಿದೆ. ಒಟ್ಟು ಶೇ 96ರಷ್ಟು ವಿದ್ಯಾಥಿಗಳು ಉತ್ತೀರ್ಣರಾಗಿದ್ದಾರೆ. ಸ್ಫೂರ್ತಿ ನಾಯ್ಕ ಶೇ 95.33 ಅಂಕಗಳೊಂದಿಗೆ ಪ್ರಥಮ ಸ್ಥಾನ, ರಂಜಿತಾ ನಾಯ್ಕ ಶೇ 93.33 ಅಂಕಗಳೊಂದಿಗೆ ದ್ವಿತೀಯ ಸ್ಥಾನ, ನಿಖಿಲ್ ನಾಯ್ಕ ಶೇ 88.50 ಅಂಕಗಳೊಂದಿಗೆ ತೃತೀಯ ಸ್ಥಾನವನ್ನು ಪಡೆದಿದ್ದಾರೆ.
ಇನ್ನು ವಾಣಿಜ್ಯ ವಿಭಾಗದಲ್ಲಿ ಪ್ರೀತಿ ನಾಯಕ್ ಶೇ 98 ಅಂಕಗಳೊAದಿಗೆ ಪ್ರಥಮ ಸ್ಥಾನ, ತಬಸ್ಸುಮ್ ಅಬ್ದುಲ್ ಸತ್ತಾರ್ ಶೇಖ್ 96.83 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಹಾಗೂ ಭೂಮಿಕಾ ಭಟ್ 95.83 ತೃತೀಯ ಸ್ಥಾನವನ್ನು ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಒಟ್ಟು ಶೇ 86.62ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ಕಾಲೇಜಿನಲ್ಲಿ ಒಟ್ಟು 329 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ 92 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 169 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 28 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, 17 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಾಲೇಜಿನ ಒಟ್ಟು ಫಲಿತಾಂಶ ಶೇ. 93.01ರಷ್ಟಾಗಿದ್ದು, ಕಳೆದ ಬಾರಿಗಿಂತ ಈ ಬಾರಿ ಶೇ. 10ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.