ಹೊನ್ನಾವರ: ತಾಲೂಕಿನ ಸರಕಾರಿ ಮೋಹನ ಕೆ.ಶೆಟ್ಟಿ ಪದವಿಪೂರ್ವ ಕಾಲೇಜಿನ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ.
ಪರೀಕ್ಷೆಗೆ 351 ವಿದ್ಯಾರ್ಥಿಗಳು ಹಾಜರಾಗಿದ್ದು, ಶೇಕಡಾ 92ರಷ್ಟು ಫಲಿತಾಂಶ ದಾಖಲಾಗಿದೆ. ಇವರಲ್ಲಿ ಕಲಾ ವಿಭಾಗದಲ್ಲಿ 6, ವಾಣಿಜ್ಯ ವಿಭಾಗದಲ್ಲಿ 15 ಮತ್ತು ವಿಜ್ಞಾನ ವಿಭಾಗದಲ್ಲಿ 21 ವಿದ್ಯಾರ್ಥಿಗಳು ಉನ್ನತ ಶ್ರೇಣಿಯನ್ನು ಪಡೆದಿದ್ದಾರೆ. ಕಲಾ ವಿಭಾದಲ್ಲಿ ಕಾರ್ತಿಕೇಯ ನಾಯ್ಕ 93.1% ಅಂಕಗಳೊಂದಿಗೆ ಪ್ರಥಮ ಸ್ಥಾನ, ಯಶೋಧಾ ಗೌಡ 92.8% ಅಂಕಗಳೊಂದಿಗೆ ದ್ವಿತೀಯ ಸ್ಥಾನ ಹಾಗೂ ದೃಶಾಲಿ ಗೌಡ 92% ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಗಾಯತ್ರಿ ನಾಯ್ಕ ಶೇ. 91 ಅಂಕಗಳೊಂದಿಗೆ ಪ್ರಥಮ ಸ್ಥಾನ, ಅಮೃತಾ ಆಚಾರಿ ಶೇ 89.8 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಹಾಗೂ ಶೈಲಾ ಗೌಡ ಶೇ 89.3 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಸಂದೇಶ ನಾಯ್ಕ 96.6% ಅಂಕಗಳೊಂದಿಗೆ ಪ್ರಥಮ ಸ್ಥಾನ, ಸಮೀಕ್ಷಾ ನಾಯ್ಕ 96.3% ಅಂಕಗಳೊಂದಿಗೆ ದ್ವಿತೀಯ ಸ್ಥಾನ, ವಿನಾಯಕ ನಾಯ್ಕ 93% ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜು ಅಭಿವೃದ್ಧಿ ಸಮಿತಿ, ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ.
ಮೋಹನ ಕೆ.ಶೆಟ್ಟಿ ಪಿಯು ಕಾಲೇಜಿಗೆ ಉತ್ತಮ ಫಲಿತಾಂಶ
