ಕುಮಟಾ: ತಾಲೂಕಿನ ವಿಧಾತ್ರಿ ಅಕಾಡೆಮಿಯು ಕೊಂಕಣ ಎಜುಕೇಷನ್ ಟ್ರಸ್ಟ್ ನ ಬಿ.ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಸಹಭಾಗಿತ್ವವನ್ನು ಹೊಂದಿದ ನಂತರ ಸತತವಾಗಿ ಮೂರನೇ ವರ್ಷವೂ ರಾಜ್ಯ ಮಟ್ಟದ ಸ್ಥಾನದೊಂದಿಗೆ ಪರೀಕ್ಷೆಗೆ ಹಾಜರಾದ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆ ಹೊಂದುವುದರ ಮೂಲಕ ಪ್ರತಿಶತ ನೂರಕ್ಕೆ ನೂರು ಫಲಿತಾಂಶವನ್ನು ನೀಡಿ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಕು. ರಂಜನಾ ಮಡಿವಾಳ 588 (98%) ಅಂಕ ಪಡೆದು ರಾಜ್ಯ ಮಟ್ಟದಲ್ಲಿ 9 ನೇ ಸ್ಥಾನ ಪಡೆಯುವುದರ ಮುಖಾಂತರ ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಕು. ಶ್ರೀನಂದಾ ದಿಂಡೆ 586 (97.67%) ಅಂಕ ಪಡೆದು ದ್ವಿತೀಯ ಸ್ಥಾನ, ಕು. ಪ್ರಾಪ್ತಿ ನಾಯಕ 585 (97.57) ಅಂಕ ಹಾಗೂ ಕು. ಶ್ರೀಜನಿ ಭಟ್ 585 (97.5%) ಅಂಕ ಪಡೆದು ಕಾಲೇಜಿಗೆ ತೃತೀಯ ಸ್ಥಾನ ಪಡೆದಿದ್ದಾರೆ. ಪರೀಕ್ಷೆಗೆ ಹಾಜರಾದ 104 ವಿದ್ಯಾರ್ಥಿಗಳಲ್ಲಿ 18 ವಿದ್ಯಾರ್ಥಿಗಳು ಶೇಕಡಾ 95ಕ್ಕಿಂತ ಹೆಚ್ಚು ಅಂಕ ಪಡೆದು, 26 ವಿದ್ಯಾರ್ಥಿಗಳು ಶೇಕಡಾ 90ಕ್ಕಿಂತ ಹೆಚ್ಚು ಅಂಕ ಪಡೆದು ಮತ್ತು 22 ವಿದ್ಯಾರ್ಥಿಗಳು ಶೇಕಡಾ 85ಕ್ಕಿಂತ ಹೆಚ್ಚು ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ ಹಾಗೂ 36 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಕು. ಶ್ರೀಲಕ್ಷ್ಮಿ ಶೆಟ್ಟಿ 588 (98.7) ಅಂಕ ಪಡೆದು ರಾಜ್ಯ ಮಟ್ಟದಲ್ಲಿ 10 ನೇ ಸ್ಥಾನ ಪಡೆಯುವುದರ ಮುಖಾಂತರ ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಕು. ಮೇಹ ಸೈಯದ್ 581 (96.83%) ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ಕು. ರೋಶನಿ ನಾಯಕ 580 (96.67%) ಅಂಕ ಪಡೆದು ಕಾಲೇಜಿಗೆ ತೃತೀಯ ಸ್ಥಾನ ಪಡೆದಿದ್ದಾರೆ. ಪರೀಕ್ಷೆಗೆ ಹಾಜರಾದ 21 ವಿದ್ಯಾರ್ಥಿಗಳಲ್ಲಿ 15 ವಿದ್ಯಾರ್ಥಿಗಳು ಶೇಕಡಾ 85 ಕ್ಕಿಂತ ಹೆಚ್ಚು ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಹಾಗೂ 5 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.
ವಿದ್ಯಾರ್ಥಿಗಳ ಅಮೋಘ ಸಾಧನೆಗೆ ಸಂಸ್ಥೆಯ ಪದಾಧಿಕಾರಿಗಳು, ವಿಧಾತ್ರಿ ಅಕಾಡೆಮಿಯ ಸಹ ಸಂಸ್ಥಾಪಕರಾದ ಗುರುರಾಜ ಶೆಟ್ಟಿ,ಪ್ರಾಂಶುಪಾಲರಾದ ಕಿರಣ ಭಟ್ಟ, ಉಪ ಪ್ರಾಂಶುಪಾಲರಾದ ಶ್ರೀಮತಿ ಸುಜಾತಾ ಹೆಗಡೆ, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಹರ್ಷವನ್ನು ವ್ಯಕ್ತಪಡಿಸಿ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.