Slide
Slide
Slide
previous arrow
next arrow

ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾದ ಮದ್ಯ ಜಪ್ತಿ

300x250 AD

ಜೊಯಿಡಾ: ಅಕ್ರಮವಾಗಿ ಗೋವಾ ಸರಾಯಿ ಸಾಗಿಸುತ್ತಿದ್ದ ವಾಹನದ ಮೇಲೆ ತಾಲೂಕಿನ ಅನಮೋಡ್ ಚೆಕ್‌ಪೋಸ್ಟ್ ಬಳಿ ಖಚಿತ ಮಾಹಿತಿ ಆಧಾರದ ಮೇರೆಗೆ ದಾಳಿ ನಡೆಸಿ ಮದ್ಯವನ್ನು ಅಬಕಾರಿ ಅಧಿಕಾರಿಗಳು ಜಪ್ತಿಪಡಿಸಿಕೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯ ಸಂತೋಷ ಚೌಗುಲೆ ಎನ್ನುವವನು ತನ್ನ ವಾಹನದಲ್ಲಿ 70.560 ಲೀ. ವಿವಿಧ ರೀತಿಯ ಮದ್ಯ ಸಾಗಿಸುತ್ತಿದ್ದ ವೇಳೆ ತಪಾಸಣೆ ನಡೆಸಿದಾಗ ಮದ್ಯ ಪತ್ತೆಯಾದ ಕಾರಣ ಚಾಲಕನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈ ಕಾರ್ಯಾಚರಣೆಯನ್ನು ಅಬಕಾರಿ ಉಪ ಆಯುಕ್ತ ಜಗದೀಶ್ ಎನ್.ಕೆ. ಹಾಗೂ ಅಬಕಾರಿ ಉಪ ಅಧೀಕ್ಷಕರು ಯಲ್ಲಾಪುರದ ಶಂಕರಗೌಡ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಸಬ್ ಇನ್ಸ್ಪೆಕ್ಟರ್ ಶ್ರೀಕಾಂತ್ ಬಿ.ಅಸೋದೆ, ಸಿಬ್ಬಂದಿಗಳಾದ ರಾಜು ಭಟ್ಕಲ್, ಯು.ಎನ್.ತುಳಜಿ ಹಾಗೂ ರಾಮನಗರ ಪೊಲೀಸ್ ಸಿಬ್ಬಂದಿಗಳಿದ್ದ ಎಸ್‌ಎಸ್‌ಟಿ ತಂಡದವರು ನಡೆಸಿದ್ದರು.

300x250 AD
Share This
300x250 AD
300x250 AD
300x250 AD
Back to top