• Slide
    Slide
    Slide
    previous arrow
    next arrow
  • ವಿಧಾನಸಭಾ ಚುನಾವಣೆ: ನಾಮಪತ್ರ ಹಿಂಪಡೆದ ಶಾರದಾ ಶೆಟ್ಟಿ

    300x250 AD

    ಕುಮಟಾ: ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯ ಸಾರಿ ಚುನಾವಣೆಗೆ ಸ್ಪರ್ಧಿಸಲು ಕುಮಟಾ-ಹೊನ್ನಾವರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ಶಾರದಾ ಶೆಟ್ಟಿ ನಾಮಪತ್ರ ಹಿಂಪಡೆದಿದ್ದಾರೆ.

    ಸೋಮವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ‘ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರವಾಣಿ ಕರೆ ಮಾಡಿ ನಾಮಪತ್ರ ಹಿಂಪಡೆಯುವಂತೆ ಕೇಳಿದರು. ಎಂ.ಎಲ್.ಸಿ. ಅಥವಾ ನಿಗಮ ಮಂಡಳಿ ಅಧ್ಯಕ್ಷ ಹುದ್ದೆ ಕೊಡುವುದಾಗಿಯೂ ಭರವಸೆ ಕೊಟ್ಟರು. ಆದರೆ ನಾನು ರಾಜಕೀಯವಾಗಿಯೇ ನಿವೃತ್ತಿ ಪಡೆಯಲು ಬಯಸಿದ್ದೇನೆ.

    ‘ಪಕ್ಷಕ್ಕಾಗಿ ಹಲವು ವರ್ಷದಿಂದ ನಾನು ಮತ್ತು ನಮ್ಮ ಕುಟುಂಬದವರು ಕೆಲಸ ಮಾಡಿದ್ದೇವೆ. ಆದರೆ ಪಕ್ಷ ಟಿಕೆಟ್ ನೀಡದಿರುವುದು ನೋವುಂಟು ಮಾಡಿದೆ. ಪಕ್ಷದ ನಿರ್ಧಾರದಿಂದ ಬಹಳಷ್ಟು ನೊಂದಿದ್ದೇನೆ’ ಎಂದರು.

    300x250 AD

    ‘ರಾಜಕೀಯ ನಿವೃತ್ತಿ ಪಡೆದ ಮೇಲೆ ಯಾರೊಬ್ಬರಿಗೂ ಬೆಂಬಲಿಸುವ ಪ್ರಮೇಯವೇ ಇಲ್ಲ. ನಮ್ಮ ಬೆಂಬಲಿಗರು ಯಾರನ್ನಾದರೂ ಬೆಂಬಲಿಸಲು ಸ್ವತಂತ್ರರು. ಪುತ್ರ ರವಿಕುಮಾರ್ ರಾಜಕೀಯ ನಿರ್ಧಾರ ಕೈಗೊಳ್ಳಲು ಸ್ವತಂತ್ರರು’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು

    Share This
    300x250 AD
    300x250 AD
    300x250 AD
    Leaderboard Ad
    Back to top