ಕಾರವಾರ: ನಗರದ ಸರ್ಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ 2023-24ನೇ ಸಾಲಿನ ಪ್ರಥಮ ವರ್ಷದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಎಸ್ಸಿ ಪದವಿಗಳ ಪ್ರವೇಶಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಆಸಕ್ತ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪ್ರವೇಶಾತಿ ಪಡೆಯಲು https://gfgc.kar.nic.in/karwar ಕಾಲೇಜಿನ ವೆಬ್‌ಲಿಂಕ್ ಅಥವಾ https://uucms.karnataka.gov.in/Login/Index ಯುಯುಸಿಎಂಎಸ್‌ನ ಲಿಂಕ್‌ಗೆ ಭೇಟಿ ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾಲೇಜಿಗೆ ಭೇಟಿ ನೀಡಲು ಪ್ರಾಂಶುಪಾಲರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಪದವಿ ಪ್ರವೇಶಾತಿಗೆ ಆಹ್ವಾನ
