Slide
Slide
Slide
previous arrow
next arrow

ಬಿಜೆಪಿಗೆ ಮತ್ತೊಮ್ಮೆ ಅಧಿಕಾರ ನೀಡಿದರೆ ಇನ್ನಷ್ಟು ಅಭಿವೃದ್ಧಿ ಸಾಧ್ಯ: ಮಂಜುನಾಥ ಜನ್ನು

300x250 AD

ಕುಮಟಾ: ದಿನಕರ ಶೆಟ್ಟಿಯವರು ಶಾಸಕರಾದ ನಂತರ ಇಡೀ ಕ್ಷೇತ್ರವನ್ನು ಅಭಿವೃದ್ಧಿ ಮಾಡುವುದಕ್ಕಾಗಿ ಹಗಲಿರುಳು ಶ್ರಮಿಸಿದ್ದಾರೆ. ಹಾಗೇ ಈ ಬಾರಿಯೂ ಕೂಡ ಅವರನ್ನು ಗೆಲ್ಲಿಸುವ ಮೂಲಕ ಬಿಜೆಪಿಗೆ ಇನ್ನೊಂದು ಅವಕಾಶ ನೀಡಬೇಕು ಎಂದು ಗೋಕರ್ಣ ಗ್ರಾ.ಪಂ. ಅಧ್ಯಕ್ಷ ಮಂಜುನಾಥ ಜನ್ನು ಹೇಳಿದರು.

ಗೋಕರ್ಣದ ವಿವಿಧ ಭಾಗಗಳಲ್ಲಿ ಹಮ್ಮಿಕೊಂಡ ಕಾರ್ಯಕ್ರಮಗಳಲ್ಲಿ ಮತಯಾಚನೆ ಮಾಡಿದರು. ಶಾಸಕ ದಿನಕರ ಶೆಟ್ಟಿ ಮಾತನಾಡಿ, ನನ್ನ ಅಧಿಕಾರವಧಿಯಲ್ಲಿ ಜಾತಿ, ಧರ್ಮಗಳನ್ನು ನೋಡದೇ ಎಲ್ಲರನ್ನು ಸಮಾನವಾಗಿ ನೋಡಿದ್ದೇನೆ. ಸಾಕಷ್ಟು ಸಮಸ್ಯೆಗಳನ್ನು ಬಗೆಹರಿಸಿದ್ದು ಎಲ್ಲವು ಒಂದೇ ಸಮಯದಲ್ಲಿ ಆಗುವುದಿಲ್ಲ. ನಿಮ್ಮೆಲ್ಲರ ಆಶೀರ್ವಾದ ಇದ್ದರೆ ಮತ್ತೆ ಜನರ ಸೇವೆ ಮಾಡುತ್ತೇನೆ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಆನಂದು ಕವರಿ, ಚಂದ್ರಶೇಖರ ನಾಯ್ಕ ಇತರರಿದ್ದರು.

300x250 AD
Share This
300x250 AD
300x250 AD
300x250 AD
Back to top