• Slide
    Slide
    Slide
    previous arrow
    next arrow
  • ಮಕ್ಕಳಲ್ಲಿ ಭಾರತೀಯ ಸಂಸ್ಕಾರ, ಸಂಸ್ಕೃತಿ ಬೆಳೆಸುವುದು ಅತ್ಯವಶ್ಯ: ಗಣೇಶ್ ಹೆಗಡೆ

    300x250 AD

    ಶಿರಸಿ: ಪ್ರತಿಯೊಬ್ಬ ಮಗು ಭಾರತೀಯ ಸಂಸ್ಕಾರ ಸಂಸ್ಕೃತಿ, ನಾಡು, ನುಡಿಯ ಬಗ್ಗೆ ಅರಿತುಕೊಳ್ಳುವುದು ಅತೀ ಅವಶ್ಯಕವಾಗಿದೆ ಎಂದು ರೋಟರಿ ಕ್ಲಬ್ ಅಧ್ಯಕ್ಷರಾದ ಗಣೇಶ್ ಹೆಗಡೆ ಅವರು ಸ್ಕೊಡವೆಸ್ ಸಂಸ್ಥೆ ಶಿರಸಿ, ದೇಸಾಯಿ ಫೌಂಡೆಶನ್ ಹಾಗೂ ರೋಟರಿ ಕ್ಲಬ್ ಶಿರಸಿ ಇವರ ಸಹಯೋಗದಲ್ಲಿ ಆಯೋಜಿಸಿದ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

    ಪ್ರತಿಯೊಬ್ಬರೂ ಶಿಬಿರದಲ್ಲಿ ನೀಡುವಂತಹ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಹೆಚ್ಚಿನ ಜ್ಞಾನವನ್ನು ಪಡೆದುಕೊಳ್ಳಬೇಕಾಗಿ ಮಕ್ಕಳಿಗೆ ಕಿವಿ ಮಾತು ಹೇಳಿದರು. ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆಯು ಅಗಾಧವಾಗಿರುವ ಕಾರಣದಿಂದಾಗಿ ಮಕ್ಕಳಿಗೆ ರಜೆಯ ದಿನಗಳಲ್ಲಿ ಇಂತಹ ಬೇಸಿಗೆ ಶಿಬಿರಗಳಿಂದ ವಿವಿಧ ಬಗೆಯ ಆರೋಗ್ಯಕರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಸಹಕಾರಿಯಾಗಿದೆ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸ್ಕೊಡವೆಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ವೆಂಕಟೇಶ್ ನಾಯ್ಕ್ ಮಾತನಾಡಿ ಮಕ್ಕಳಲ್ಲಿ ಪರಿಪೂರ್ಣ ವ್ಯಕ್ತಿತ್ವವನ್ನು ರೂಪಿಸುವುದು. ಕ್ರಿಯಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನಗೊಳಿಸಲು ಸಾಧ್ಯ ಮಕ್ಕಳು ರಜಾ ದಿನಗಳಲ್ಲಿ ಮೊಬೈಲ್ ಬಳಕೆ ಅಥವಾ ಇನ್ನಿತರ ಅನಗತ್ಯ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದನ್ನು ನಿಯಂತ್ರಿಸಿ, ಉತ್ತಮ ಭವಿಷ್ಯವನ್ನು ರೂಪಿಸುವಲ್ಲಿ ಇಂತಹ ಬೇಸಿಗೆ ಶಿಬಿರಗಳು ಸಹಕಾರಿಯಾಗಲಿದೆ. ಸ್ಕೊಡವೆಸ್ ಸಂಸ್ಥೆಯು ಪ್ರಸ್ತುತ ವರ್ಷದಲ್ಲಿ ಸುಮಾರು 2000 ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಆಯೋಜಿಸುವ ಯೋಜನೆಯನ್ನು ಹೊಂದಿದ್ದು, ತಾಲೂಕಿನ ಬೇರೆ ಬೇರೆ ಸ್ಥಳಗಳಲ್ಲಿ ಆಯೋಜಿಸಲಾಗುವುದು ಎಂದರು.

    300x250 AD

    ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ.ದಿನೇಶ್ ಹೆಗಡೆ ಮಾತನಾಡಿ ಇದು ಒಂದು ಅತ್ಯುತ್ತಮ ಶಿಬಿರವಾಗಿದ್ದು,ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಅತ್ಯಂತ ಉಪಯುಕ್ತವಾಗಿದೆ. ಇಂತಹ ಮೌಲ್ಯಧಾರಿತ ಚಟುವಟಿಕೆಗಳು ಮಕ್ಕಳ ಭವಿಷ್ಯದಲ್ಲಿ ಉಪಯೋಗಕಾರಿಯಾಗಲಿದೆ ಎಂದರು.
    ಮತ್ತೋರ್ವ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸ್ಕೊಡವೆಸ್ ಸಂಸ್ಥೆಯ ಮುಖ್ಯ ಹಣಕಾಸು ಮತ್ತು ಆಡಳಿತಧಿಕಾರಿಗಳಾದ ಸರಸ್ವತಿ ಎನ್.ರವಿ, ಅವರು ಮಾತನಾಡಿ ಮಕ್ಕಳು ಶಾಲೆಯಲ್ಲಿ ಕಲಿಸುವ ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮಕ್ಕಳು ಮಾನಸಿಕ ಹಾಗೂ ದೈಹಿಕ ಸದೃಡತೆ ಹೊಂದಲು ಸಹಕಾರಿಯಾಗಲಿದೆ. ಶಿಬಿರದಲ್ಲಿ ಮಕ್ಕಳು ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಬೇಕು ಎಂದರು.

    ಕಾರ್ಯಕ್ರಮದಲ್ಲಿ ದೇಸಾಯಿ ಫೌಂಡೇಶನ್ ಸಮನ್ವಯಾಧಿಕಾರಿಯಾದ ವಿನಯಾ ನಾಯ್ಕ್, ಸ್ಕೊಡವೆಸ್ ಸಂಸ್ಥೆಯ ಜಿಲ್ಲಾ ಸಮನ್ವಯಾಧಿಕಾರಿ ಹೇಮಲತಾ ಚೌಗಲೆ, ಸ್ಕೊಡವೆಸ್ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಹೇಮಲತಾ ಚೌಗಲೆ ನಿರೂಪಿಸಿ, ಉಮೇಶ್ ಮರಾಠಿ ಸ್ವಾಗತಿಸಿ, ದಿನೇಶ್ ವಂದಿಸಿದರು.

    Share This
    300x250 AD
    300x250 AD
    300x250 AD
    Leaderboard Ad
    Back to top