Slide
Slide
Slide
previous arrow
next arrow

ಮೇ.3ಕ್ಕೆ ಜಿಲ್ಲೆಗೆ ಪ್ರಧಾನಿ ಮೋದಿ: ಜಿಲ್ಲೆಯ ಎಲ್ಲ ಅಭ್ಯರ್ಥಿಗಳ ಪರ ಪ್ರಚಾರ

300x250 AD

ಕಾರವಾರ: ಮೇ.3ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ ಎಂದು ಕೇಂದ್ರ ಪ್ರವಾಸೋದ್ಯಮ ಇಲಾಖೆ ರಾಜ್ಯ ಖಾತೆ ಸಚಿವ ಶ್ರೀಪಾದ ನಾಯ್ಕ ಹೇಳಿದರು.

ಸಮಾವೇಶಕ್ಕೆ ಮೂರು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರನ್ನು ಸೇರಿಸಲಾಗುವುದು. ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಪರವಾಗಿ ಅವರು ಪ್ರಚಾರ ನಡೆಸಲಿದ್ದು, ಎಲ್ಲ ಕ್ಷೇತ್ರದಲ್ಲಿಯೂ ಗೆಲ್ಲುವ ಗುರಿ ಇಟ್ಟುಕೊಂಡಿದ್ದೇವೆ ಎಂದು ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

300x250 AD

ಈ ವೇಳೆ ವಿಧಾನ ಪರಿಷತ್‌ ಸದಸ್ಯ ಗಣಪತಿ ಉಳ್ವೇಕರ್, ಗೋವಾ ರಾಜ್ಯದ ಮಾಹಿಮ್ ಕ್ಷೇತ್ರದ ಶಾಸಕ ಪ್ರೇಮ ಶೇಟ್, ನಗರಸಭೆ ಅಧ್ಯಕ್ಷ ಡಾ.ನಿತಿನ್ ಪಿಕಳೆ, ಉಪಾಧ್ಯಕ್ಷ ಪ್ರಕಾಶ ನಾಯ್ಕ, ಬಿಜೆಪಿ ಜಿಲ್ಲಾ ಘಟಕದ ವಕ್ತಾರ ನಾಗರಾಜ ನಾಯಕ, ನಾಗೇಶ ಕುರ್ಡೇಕರ್ ಇತರರು ಇದ್ದರು.

Share This
300x250 AD
300x250 AD
300x250 AD
Back to top