ದಾಂಡೇಲಿ: ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ನಗರದ ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆಯ ಸಿ.ಎಸ್.ಆರ್ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ಸುಸಜ್ಜಿತ ಆಟೋ ನಿಲ್ದಾಣವು ಏ.29ರಂದು ಉದ್ಘಾಟನೆಗಾಗಿ ಅಣಿಯಾಗುತ್ತಿದೆ.
ಜಿಲ್ಲೆಯಲ್ಲಿ ಅತೀ ಉದ್ದದ ಮತ್ತು ವೈಶಿಷ್ಟö್ಯಪೂರ್ಣ ಎನ್ನಬಹುದಾದ ಆಟೋ ನಿಲ್ದಾಣ ಇದಾಗಿದ್ದು, ನಗರದ ಶೋಭೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮುಂದಡಿಯಿಡಲಿದೆ. ಈ ನೂತನ ಆಟೋ ನಿಲ್ದಾಣವನ್ನು ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ರಾಜೇಂದ್ರ ಜೈನ್ ಅವರು ಉದ್ಘಾಟಿಸಲಿದ್ದಾರೆ ಎಂದು ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ್ ತಿವಾರಿ ತಿಳಿಸಿದ್ದಾರೆ.