• Slide
    Slide
    Slide
    previous arrow
    next arrow
  • ಮೋದಿ ಆಗಮನದಿಂದ ಜಿಲ್ಲೆಯ ಭಾಗ್ಯದ ಬಾಗಿಲು ತೆರೆಯಲಿದೆ: ರೂಪಾಲಿ ನಾಯ್ಕ

    300x250 AD

    ಅಂಕೋಲಾ: ದೇವಮಾನವ ನರೇಂದ್ರ ಮೋದಿ ಇದೇ ಪ್ರಥಮ ಬಾರಿಗೆ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸುತ್ತಿರುವುದರಿಂದ ಜಿಲ್ಲೆಯ ಭಾಗ್ಯದ ಬಾಗಿಲು ತೆರೆದುಕೊಳ್ಳಲಿದೆ. ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಮೋದಿ ಅವರ ಈ ಭೇಟಿ ಕಾರಣವಾಗಲಿದೆ ಎಂಬ ವಿಶ್ವಾಸ ನನಗಿದೆ ಎಂದು ಶಾಸಕಿಯೂ ಆಗಿರುವ ಬಿಜೆಪಿ ಅಭ್ಯರ್ಥಿ ರೂಪಾಲಿ ನಾಯ್ಕ ಹೇಳಿದರು.

    ತಾಲೂಕಿನ ಹಟ್ಟಿಕೇರಿಯಲ್ಲಿ ಪ್ರಧಾನಿ ಮೋದಿ ಸಮಾವೇಶದ ಸ್ಥಳಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಮೇ 3ರಂದು ಮಧ್ಯಾಹ್ನ ಸುಮಾರು 12 ಗಂಟೆಗೆ ನರೇಂದ್ರ ಮೋದಿಯವರು ಇಲ್ಲಿಗೆ ಆಗಮಿಸಿ ಉತ್ತರ ಕನ್ನಡ ಜಿಲ್ಲೆಯ ಎಲ್ಲ ಆರೂ ಕ್ಷೇತ್ರಗಳ ಜನತೆಯನ್ನುದ್ದೇಶಿಸಿ ಪ್ರಚಾರ ಸಭೆ ನಡೆಸಲಿದ್ದಾರೆ. ಮೋದಿ ಅವರ ಜತೆಗೆ ಬಿ.ಎಲ್.ಸಂತೋಷ್, ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಿಲ್ಲೆಯ ಹಾಗೂ ಇತರೆಡೆಯ ಸಚಿವರುಗಳು, ಶಾಸಕರುಗಳು, ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

    ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಮೇ 3ರಂದು ಉತ್ತರ ಕನ್ನಡ ಜಿಲ್ಲೆಯ ಎಲ್ಲ ಆರೂ ವಿಧಾನಸಭಾ ಕ್ಷೇತ್ರಗಳನ್ನು ಕೇಂದ್ರೀಕರಿಸಿ ಅಂಕೋಲಾದ ಹಟ್ಟಿಕೇರಿಯಲ್ಲಿ ಸಮಾವೇಶ ನಡೆಸುತ್ತಿದ್ದಾರೆ. ಈಗ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದಾರೆ. ಮೋದಿ ಅವರ ಪ್ರಭಾವ, ಶಾಸಕರು ಕೈಗೊಂಡ ಅಭಿವೃದ್ಧಿ ಕಾಮಗಾರಿ ಹಾಗೂ ಮೋದಿ ಅವರನ್ನು ಒಪ್ಪಿಕೊಂಡು ಬರುವ ಲಕ್ಷಾಂತರ ಜನರು ಈ ಬಾರಿ ಜಿಲ್ಲೆಯ ಎಲ್ಲ ಆರೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲಿದ್ದಾರೆ ಎಂಬ ವಿಶ್ವಾಸ ಇದೆ. ರಾಜ್ಯದಲ್ಲೂ 150ರಷ್ಟು ಸ್ಥಾನ ಪಡೆದು ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

    300x250 AD

    ಪಕ್ಷದ ಮುಖಂಡರಾದ ರಾಜೇಂದ್ರ ನಾಯ್ಕ, ಜಗದೀಶ ಮೊಗಟಾ, ಎನ್.ಎಸ್.ಹೆಗಡೆ, ಸಂಜಯ ನಾಯ್ಕ, ಭಾಸ್ಕರ ನಾರ್ವೇಕರ ಎಲ್ಲ ಕಾರ್ಯಕರ್ತರು, ಪದಾಧಿಕಾರಿಗಳು ಈ ಭೂಮಿ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಪ್ರಧಾನಿ ಮೋದಿ ಸಮಾವೇಶದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಉತ್ಯುತ್ಸಾಹದಲ್ಲಿದ್ದಾರೆ. ಕ್ಷೇತ್ರದ ಪ್ರತಿಯೊಂದು ಮನೆ ಮನೆಯಿಂದಲೂ ಎಲ್ಲ ಜನತೆ ಈ ಸಮಾವೇಶಕ್ಕೆ ಆಗಮಿಸುವಂತೆ ಸ್ವಾಗತಿಸುತ್ತೇನೆ ಎಂದು ಶಾಸಕರು ಹೇಳಿದರು.
    ಪ್ರಧಾನಿ ನರೇಂದ್ರ ಮೋದಿ ಅವರ ಈ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸುವ ಪ್ರಯತ್ನವೂ ನಡೆಯಿತು. ಅದೆಲ್ಲ ಗೊತ್ತಿರುವ ಸಂಗತಿ. ಅಂದು ನಡೆಯಲಿರುವ ಸಮಾವೇಶದಲ್ಲಿ 3 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು. ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top