Slide
Slide
Slide
previous arrow
next arrow

ಅವೇಡಾದಲ್ಲಿ ದೇಶಪಾಂಡೆ ಪರ ಪ್ರಚಾರ

300x250 AD

ಜೊಯಿಡಾ: ತಾಲೂಕಿನ ಅವೇಡಾ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಮಹಿಳೆಯರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆರ್.ವಿ.ದೇಶಪಾಂಡೆ ಅವರಿಗೆ ಮತ ನೀಡುವಂತೆ ಮತ ಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವೇಡಾ ಗ್ರಾ.ಪಂ.ಸದಸ್ಯ ಅರುಣ ಭಗವತಿರಾಜ್ ಆರ್.ವಿ.ದೇಶಪಾಂಡೆ ಅವರು ತಾಲೂಕಿನ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ, ಪ್ರವಾಸೋದ್ಯಮ ,ರಸ್ತೆ, ನೀರು, ವಿದ್ಯುತ್, ಆಸ್ಪತ್ರೆ ,ಶಿಕ್ಷಣ ಸೇರಿದಂತೆ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತಾಲೂಕಿನಲ್ಲಿ ಮಾಡಿದ್ದಾರೆ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಮ್ಮ ಪಕ್ಷದ ಗ್ಯಾರಂಟಿ ಕಾರ್ಡನಲ್ಲಿ ಇರುವ ಎಲ್ಲಾ ಭರವಸೆಗಳನ್ನು ಇಡೇರಿಸುತ್ತೇವೆ ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಕೇಳಿಕೊಂಡರು.
ಈ ಸಂದರ್ಭದಲ್ಲಿ ಅವೇಡಾ ಗ್ರಾ.ಪಂ. ಅಧ್ಯಕ್ಷೆ ರೇಣುಕಾ ಗದ್ದಿ, ಸದಸ್ಯ ಮಹಮ್ಮದ್ ಗೌಸ್ ಸೇರಿದಂತೆ ನೂರಾರು ಮಹಿಳೆಯರು ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top