ಯಲ್ಲಾಪುರ: ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಶುಕ್ರವಾರ ಕುಟುಂಬ ಸಮೇತರಾಗಿ ಶಿರಸಿ ತಾಲೂಕಿನ ಸೋಂದಾ ಶ್ರೀ ಸ್ವರ್ಣವಲ್ಲೀ ಮಹಾ ಸಂಸ್ಥಾನಕ್ಕೆ ಭೇಟಿ ನೀಡಿದರು.
31 ನೇ ಚಾತುರ್ಮಾಸ್ಯದ ವೃತದಲ್ಲಿರುವ ಮಹಾ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳನ್ನು ಭೇಟಿಯಾಗಿ ಶ್ರೀಗಳ ದಿವ್ಯಾಶೀರ್ವಾದವನ್ನು ಪಡೆದರು.