ಶಿರಸಿ: ಕನ್ನಡ ಸಾಹಿತ್ಯ ಪರಿಷತ್ತಿನ 109ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಮೇ.5ರಂದು ನಗರದ ನೆಮ್ಮದಿ ಕುಟೀರದಲ್ಲಿ ಆಯೋಜಿಸಲಾಗಿದೆ.
ಕನ್ನಡದ ಅಸ್ಮಿತೆ ಮತ್ತು ಕನ್ನಡ ಸಾಹಿತ್ಯ ಪರಿಷತ್ ವಿಷಯದ ಕುರಿತು ಪ್ರೊ.ಡಿ.ಎಮ್. ಭಟ್ ಕುಳವೆ ಉಪನ್ಯಾಸ ನೀಡಲಿದ್ದು ನಿವೃತ್ತ ಲೆಕ್ಕ ಪರಿಶೋಧಕ ಜಿ.ಕೆ. ರಾಮಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸಿಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ಶಿರಸಿ ತಾಲೂಕಾಧ್ಯಕ್ಷ ಸುಬ್ರಾಯ ಭಟ್ ಬಕ್ಕಳ ವಹಿಸಲಿದ್ದಾರೆ.
ಹಿರಿ ಕಿರಿಯ ಕವಿ ಮನಸ್ಸುಗಳಿಗೆ ಕವನ ವಾಚನ ಮಾಡಲು ಅವಕಾಶ ಕಲ್ಪಿಸಲಾಗಿದ್ದು ಆಸಕ್ತ ಕವಿಗಳು ತಮ್ಮ ಹೆಸರನ್ನು ಮುಂಚಿತವಾಗಿ ನೋಂದಾಯಿಸಿಕೊಳ್ಳಬೇಕು ಎಂದು ಕಸಾಪ ಶಿರಸಿ ತಾಲೂಕಾ ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.