ಅಂಕೋಲಾ: ತಾಲೂಕಿನ ಹಟ್ಟಿಕೇರಿಯಲ್ಲಿ ಆಯೋಜಿಸಲಾಗಿರುವ ಬಿಜೆಪಿ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದ್ದ ವೇಳೆ ಪದ್ಮ ಪ್ರಶಸ್ತಿ ಪುರಸ್ಕೃತರನ್ನು ಭೇಟಿಯಾದರು.
ಸಮಾರಂಭಕ್ಕೂ ಮೊದಲು ಪದ್ಮ ಪ್ರಶಸ್ತಿ ಪುರಸ್ಕೃತರಾದ ತುಳಸಿ ಗೌಡ ಮತ್ತು ಸುಕ್ರಿ ಬೊಮ್ಮಗೌಡ ಅವರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಗೌರವಪೂರಕ ನಮನ ಸಲ್ಲಿಸಿದರು. ಹಾಲಕ್ಕಿ ಸಮುದಾಯಕ್ಕೆ ಸೇರಿದ ಈ ಮಹಾನ್ ಮಹಿಳೆಯರ ಸಾಧನೆಗೆ ಮೆಚ್ಚಿ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಯನ್ನು ಭಾರತ ಸರ್ಕಾರ ನೀಡಿ ಗೌರವಿಸಿತ್ತು.