ಶಿರಸಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿರಸಿ ಶೈಕ್ಷಣಿಕ ಜಿಲ್ಲೆ, ಶಿರಸಿ (ಉ.ಕ.) ಭಾರತ ಸೇವಾದಳ ಜಿಲ್ಲಾ ಸಮಿತಿ ಶಿರಸಿ ಹಾಗೂ ಭಾರತ ಸೇವಾದಳ ತಾಲೂಕು ಸಮಿತಿ ಶಿರಸಿ ಇವರ ಸಂಯುಕ್ತ ಆಶ್ರಯದಲ್ಲಿ ಭಾರತ ಸೇವಾದಳ ಶತಮಾನೋತ್ಸವದ ಆಚರಣೆಯ ಅಂಗವಾಗಿ 5ನೇ ತರಗತಿಯಿಂದ 10ನೇ ತರಗತಿಯ ಮಕ್ಕಳಿಗೆ ನಾಯಕತ್ವ ತರಬೇತಿಯ ಬೇಸಿಗೆ ಶಿಬಿರವನ್ನು ಮೇ. 07ರವರೆಗೆ ಭಾರತ ಸೇವಾದಳ ಜಿಲ್ಲಾ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಶಿಬಿರದ ಉದ್ಘಾಟನೆಯನ್ನು ಜ್ಯೋತಿ ಬೆಳಗಿಸುವುದರೊಂದಿಗೆ ಮಕ್ಕಳ ತಜ್ಞರಾದ ಡಾ.ದಿನೇಶ ಹೆಗಡೆ ನೆರವೇರಿಸಿದರು. ಮಕ್ಕಳಿಗೆ ಆರೋಗ್ಯದ ಕುರಿತು ವಯಕ್ತಿಕ ಸ್ವಚ್ಛತೆ, ಪರಿಸರ ಸ್ವಚ್ಛತೆ, ಕೈ ತೊಳೆಯುವ ರೀತಿ ಅಲ್ಲದೇ ಜಂಕ್‌ಪುಡ್ ತಿನ್ನುವುದರಿಂದ ಆಗುವ ದುಷ್ಪರಿಣಾಮದ ಕುರಿತು ಮಕ್ಕಳಿಗೆ ತಿಳಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತ ಸೇವಾದಳದ ಜಿಲ್ಲಾ ಕಾರ್ಯದರ್ಶಿಗಳಾದ ಪ್ರೊ.ಕೆ.ಎನ್.ಹೊಸಮನಿರವರು ವಹಿಸಿ ಮಕ್ಕಳಿಗೆ ಶುಭ ಕೋರಿದರು.
ತಾಲೂಕಾ ಭಾರತ ಸೇವಾದಳ ಅಧ್ಯಕ್ಷ ಅಶೋಕ ಭಜಂತ್ರಿ ಧ್ವಜವಂದನೆ ನೆರವೇರಿಸಿ ಮಕ್ಕಳಿಗೆ ಶುಭ ಕೋರಿದರು. ಜಿಲ್ಲಾ ಸಂಘಟಕ ರಾಮಚಂದ್ರ ಹೆಗಡೆ, ಕುಮಾರ ಎಸ್.ನಾಯ್ಕ, ಸಂಪನ್ಮೂಲ ವ್ಯಕ್ತಿಗಳು ಶ್ರೀಮತಿ ಸಾವಿತ್ರಿ ಭಟ್ಟ ಉಪಸ್ಥಿತರಿದ್ದರು. ಶಿಬಿರದಲ್ಲಿ 60 ಮಕ್ಕಳು ಭಾಗವಹಿಸಿದ್ದರು. ಸರ್ವಧರ್ಮ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ರಾಮಚಂದ್ರ ಹೆಗಡೆ ಪ್ರಾಸ್ತಾವಿಕ ನುಡಿದರೆ, ಕುಮಾರ ನಾಯ್ಕ ಸ್ವಾಗತಿಸಿದರು. ಸಾವಿತ್ರಿ ಭಟ್ಟ ವಂದಿಸಿದರು.