Slide
Slide
Slide
previous arrow
next arrow

ಅರಣ್ಯವಾಸಿಗಳ ಸಮಸ್ಯೆ ಪ್ರಸ್ತಾಪಿಸದ ಪ್ರಧಾನಿ ಮೋದಿ: ರವೀಂದ್ರ ನಾಯ್ಕ ವಿಷಾದ

300x250 AD

ಕುಮಟಾ: ಚುನಾವಣೆ ಪ್ರಚಾರಾರ್ಥವಾಗಿ ಜಿಲ್ಲೆಗೆ ಆಗಮಿಸಿದ ದೇಶದ ಪ್ರಧಾನ ಮಂತ್ರಿ ಜಿಲ್ಲೆಯ ಜ್ವಲಂತ ಸಮಸ್ಯೆಗಳಲ್ಲಿ ಒಂದಾದ ಅರಣ್ಯವಾಸಿಗಳ ಸಮಸ್ಯೆಗಳ ಪರಿಹಾರದ  ಕುರಿತು ಪ್ರಸ್ತಾಪಿಸದೇ ಇರುವುದು ವಿಷಾದಕರ ಎಂದು ಕಾಂಗ್ರೆಸ್ ಧುರೀಣ ಹಾಗೂ ಕುಮಟಾ ಮತ್ತು ಹೊನ್ನಾವರ ಕೆಪಿಸಿಸಿ ಸಂಯೋಜಕ ರವೀಂದ್ರ ನಾಯ್ಕ ವಿಷಾದ ವ್ಯಕ್ತಪಡಿಸಿದರು.

ಕುಮಟಾ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರಾರ್ಥವಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೊನ್ನಪ್ಪ ನಾಯ್ಕ ನೇತೃತ್ವದಲ್ಲಿ ವಿವಿಧ ಗ್ರಾಮಗಳಿಗೆ ಭೇಟಿಕೊಟ್ಟ ಸಂದರ್ಭದಲ್ಲಿ ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಅರಣ್ಯ ಹಕ್ಕು ಕಾಯಿದೆ ಅನುಷ್ಠಾನದಲ್ಲಿ ವೈಫಲ್ಯ, ಸರ್ವೋಚ್ಚ ನ್ಯಾಯಾಲಯದಲ್ಲಿ ಅರಣ್ಯವಾಸಿಗಳ ವಿರೋಧ ನೀತಿಯನ್ನು ಕೇಂದ್ರ ಮತ್ತು ರಾಜ್ಯ ಸರಕಾರ ಅನುಸರಿಸುವ ಹಿನ್ನೆಲೆಯಲ್ಲಿ ಅರಣ್ಯವಾಸಿಗಳ ಪರವಾದ ನಿಲುವನ್ನು ಪ್ರಧಾನ ಮಂತ್ರಿಗಳು ಪ್ರಕಟಿಸುವರೆಂಬ ನಂಬಿಕೆ  ಅರಣ್ಯವಾಸಿಗಳಿಗೆ ಹುಸಿಯಾಗಿದೆ ಎಂದು ಅವರು ಖೇದ ವ್ಯಕ್ತಪಡಿಸಿದರು.

ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳು ಸಹಿತ ಪ್ರಧಾನ ಮಂತ್ರಿಗಳಿಗೆ ಅರಣ್ಯವಾಸಿಗಳ ಹಕ್ಕಿನ ಸಮಸ್ಯೆಗಳ ಕುರಿತು  ಮನವರಿಕೆ ಮಾಡದೇ ಇರುವುದು ಖೇದಕರ.

300x250 AD

ಚುನಾವಣೆ ಸಂದರ್ಭದಲ್ಲಿ ಜಿಲ್ಲೆಯ 85000 ಅರಣ್ಯವಾಸಿಗಳ ಕುಟುಂಬಗಳ ಹಿತದೃಷ್ಟಿಯಿಂದ ರಾಜ್ಯ ಮತ್ತು ಕೇಂದ್ರ ಸರಕಾರದಲ್ಲಿ ಭಾರತೀಯ ಜನತಾ ಪಕ್ಷದ ಆಡಳಿತ ಇರುವುದರಿಂದ ಸ್ಪಷ್ಟ ನಿಲುವನ್ನು ಪ್ರಕಟಿಸದೇ ಇರುವುದು ವಿಷಾದಕರ ಎಂದು ಅವರು ತಿಳಿಸಿದರು.

ಬಿಜೆಪಿ ನಿಲುವು ಪ್ರಕಟಿಸಲು ಒತ್ತಾಯ: ಮನಮೋಹನಸಿಂಗ್ ಪ್ರಧಾನ ಮಂತ್ರಿ ಇರುವಂತಹ ಸಂದರ್ಭದಲ್ಲಿ ಕಾಂಗ್ರೇಸ್ ಪಕ್ಷ ಜಾರಿಗೆ ತಂದಿರುವ ಅರಣ್ಯ ಹಕ್ಕು ಕಾಯಿದೆ ಅನುಷ್ಟಾನದಲ್ಲಿ, ಅರಣ್ಯ ಹಕ್ಕು ಕಾಯಿದೆಯಲ್ಲಿ ಹಕ್ಕನ್ನು ಕೊಡುವ ದಿಶೆಯಲ್ಲಿ ಭಾರತೀಯ ಜನತಾ ಪಕ್ಷ ಸ್ಪಷ್ಟ ನಿಲುವನ್ನು ಪ್ರಕಟಿಸಬೇಕೆಂದು ರವೀಂದ್ರ ನಾಯ್ಕ ಪ್ರಕಟಿಸಿದ್ದಾರೆ.

Share This
300x250 AD
300x250 AD
300x250 AD
Back to top