ಹಳಿಯಾಳ: ನಗರದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯಯು ಕೌಶಲ್ಯ ಆಧಾರಿತ ತರಬೇತಿ ಹಮ್ಮಿಕೊಳ್ಳುತ್ತಿದ್ದು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
18 ರಿಂದ 45 ವರ್ಷದೊಳಗಿನ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವ- ಉದ್ಯೋಗ ಪ್ರಾರಂಭಿಸಿ ಸ್ವಾಲಂಬಿ ಜೀವನ ನಡೆಸುವ ಅನುಕೂಲಕ್ಕಾಗಿ 10 ದಿನಗಳ ಫಾಸ್ಟ್ ಫುಡ್ ಸ್ಟಾಲ್ ಉದ್ಯಮ ಟೈನಿಂಗ್ ಹಾಗೂ 13 ದಿನಗಳ ಕೃಷಿ ಉದ್ಯಮಿ ಟ್ರೈನಿಂಗ್ ಉಚಿತ ತರಬೇತಿ ಸೆಪ್ಟೆಂಬರ್ ತಿಂಗಳಲ್ಲಿ ಹಮ್ಮಿಕೊಂಡಿದೆ. ತರಬೇತಿಯು ಊಟ ವಸತಿಯೊಂದಿಗೆ ಉಚಿತವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದರಿಗೆ ಆದ್ಯತೆ ನೀಡಲಾಗುವುದು. ಸಾಫ್ಟ್ ಸ್ಟೀಲ್ಸ್, ಯೋಗ ಬ್ಯಾಂಕಿಂಗ್ ಹಾಗೂ ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಬಗೆಗಿನ ಮಾಹಿತಿ ತರಬೇತಿಯಲ್ಲಿ ಉಚಿತವಾಗಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್, ದೂರವಾಣಿ ಸಂಖ್ಯೆ: 9483485489, 9482188780, 9743321602, 9632225123, 08284-295307, 08284-220807ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಕೆನರಾ ನಿರ್ದೇಶಕ ಪ್ರಸನ್ನಕುಮಾರ ಕುಲಕರ್ಣಿ ತಿಳಿಸಿದ್ದಾರೆ.