Slide
Slide
Slide
previous arrow
next arrow

ಇಂದು ಹೊನ್ನಾವರದಲ್ಲಿ ಯೋಗಿ ಆದಿತ್ಯನಾಥ್ ಪ್ರಚಾರ ಸಭೆ

300x250 AD

ಹೊನ್ನಾವರ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮೇ 6ರಂದು ಚುನಾವಣಾ ಪ್ರಚಾರಕ್ಕಾಗಿ ಹೊನ್ನಾವರಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 2.30 ಗಂಟೆಗೆ ಪಟ್ಟಣದ ಸೇಂಟ್ ಅಂತೋನಿ ಪ್ರೌಢಶಾಲಾ ಮೈದಾನದಲ್ಲಿ ಸಭೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ವೆಂಕಟೇಶ ನಾಯಕ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 20 ಸಾವಿರದಷ್ಟು ಜನರು ಸ್ವಯಂ ಪ್ರೇರಿತರಾಗಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು. ಅಂಕೋಲಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆಗಮನದಿಂದ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮಡಿಯಾಗಿದೆ. ಜನರು ಬಿಜೆಪಿ ಕಡೆಗೆ ಒಲವು ವ್ಯಕ್ತಪಡಿಸುತ್ತಿದ್ದಾರೆ. ಕಳೆದ ಬಾರಿ ಜಿಲ್ಲೆಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳನನು ಬಿಜೆಪಿ ಗೆದ್ದಿತ್ತು. ಈ ಬಾರಿ ಆರಕ್ಕೆ ಆರು ಸ್ಥಾನಗಳನ್ನು ಗೆಲ್ಲುತ್ತದೆ. ತನ್ಮೂಲಕ ಕರ್ನಾಟಕದಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಪಕ್ಷದ ವರಿಷ್ಠರ ಸಂಕಲ್ಪಕ್ಕೆ ಉತ್ತರ ಕನ್ನಡ ಜಿಲ್ಲೆಯ ಗೆಲುವು ಕೊಡುಗೆಯಾಗಲಿದೆ ಎಂದರು.
ಬಿಜೆಪಿ ಹೊನ್ನಾವರ ಮಂಡಲದ ಅಧ್ಯಕ್ಷ ರಾಜೇಶ ಭಂಡಾರಿ, ಮುಖಂಡರಾದ ಉಮೇಶ ನಾಯ್ಕ, ಎಂ.ಎಸ್.ಹೆಗಡೆ ಕಣ್ಣಿಮನೆ, ಚಂದ್ರು ಎಸಳೆ ಮತ್ತಿತರಿದ್ದರು.

300x250 AD
Share This
300x250 AD
300x250 AD
300x250 AD
Back to top