ಶಿರಸಿ: ಉತ್ತರ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್’ನಿಂದ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಯವರ 77ನೇ ಜನ್ಮ ದಿನದ ಸಂದರ್ಭದಲ್ಲಿ ದೇಶ ಭಕ್ತಿಗೀತೆಗಳ ಗಾಯನ ಸ್ಪರ್ಧೆ ಏರ್ಪಡಿಸಿ ಯುವ ಪ್ರತಿಭೆಗಳಿಗೆ ಪ್ರೋತ್ಸಾಹದಾಯಕ ಕಾರ್ಯಕ್ರಮ ಅತ್ಯಂತ ವ್ಯವಸ್ಥಿತವಾಗಿ ನೆರವೇರಿತು.
ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ ಸ್ಪರ್ಧಾಳುಗಳು ದೇಶಭಕ್ತಿಗೀತೆಯನ್ನು ಪ್ರಸ್ತುತಪಡಿಸಿ ಕಾರ್ಯಕ್ರಮಕ್ಕೆ ಮೆರಗು ನೀಡಿದರು. ದೀಪ ಬೆಳಗಿಸುವುದರೊಂದಿಗೆ ಕಾರ್ಯಕ್ರಮವನ್ನು ಶಿರಸಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಮೇಶ್ ದುಭಾಶಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ರವೀಂದ್ರ ನಾಯ್ಕ್, ಪ್ರದೀಪ್ ಶೆಟ್ಟಿ, ಸತೀಶ್ ನಾಯ್ಕ್ ಮಧುರವಳ್ಳಿ, ರಾಜು ಉಗ್ರಣಕಾರ್ ಉಪಸ್ಥಿತರಿದ್ದರು. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉತ್ತರ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಕುಮಾರ ಜೋಶಿ ವಹಿಸಿದ್ದರು. ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಲ್ಲಿಕ್ ಸ್ವಾಗತಿಸಿ, ಶ್ರೀಧರ್ ಹೆಗಡೆ ಹಲಸರಿಗೆ ಕಾರ್ಯಕ್ರಮ ನಿರ್ವಹಿಸಿದರು.
ಮುಕ್ತಾಯ ಸಮಾರಂಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ್ ಭಾಗವಹಿಸಿ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿ ದಿ.ರಾಜೀವ ಗಾಂಧಿಯವರ ಜನ್ಮ ದಿನವನ್ನು ರಾಜಕೀಯೇತರ ಕಾರ್ಯಕ್ರಮವಾಗಿ ಆಚರಿಸಿ ಯುವ ಜನರಿಗೆ ದೇಶಭಕ್ತಿಯನ್ನು ಪ್ರಚೋದಿಸುವ ಸ್ಪರ್ಧೆ ಏರ್ಪಡಿಸಿ ಅಚ್ಚುಕಟ್ಟಾಗಿ ಸಂಪನ್ನಗೊಳಿಸಿರುವುದು ಶ್ಲಾಘನೀಯ ಎಂದು ಹೇಳಿ ದೇಶಕ್ಕೆ ದಿ.ರಾಜೀವ್ ಗಾಂಧಿಯವರು ನೀಡಿದ ಕೊಡುಗೆಗಳನ್ನು ಸ್ಮರಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಕೆ ಭಾಗವತ್, ಶಿರಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ ಗೌಡ, ಕಾಂಗ್ರೆಸ್ ಜಿಲ್ಲಾ ಕಾರ್ಮಿಕ ವಿಭಾಗದ ಅಧ್ಯಕ್ಷ ಶ್ರೀನಿವಾಸ್ ನಾಯ್ಕ್, ಜಿಲ್ಲಾ ಕಾಂಗ್ರೆಸ್ ವಕ್ತಾರ ದೀಪಕ್ ಹೆಗಡೆ ದೊಡ್ದುರ್, ಮಾಜಿ ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ನಾಗರಾಜ ಮಡಿವಾಳ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಜಿ ಎನ್ ಹೆಗಡೆ ಮುರೇಗಾರ್, ಶಿರಸಿ ಬ್ಲಾಕ್ ಉಪಾಧ್ಯಕ್ಷ ಗಣೇಶ್ ದಾವಣಗೆರೆ, ಸಿದ್ದಾಪುರ ತಾಲೂಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೀಮಾ ಹೆಗಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಕುಮಾರ ಜೋಶಿ ಸ್ವಾಗತಿಸಿ, ಶ್ರೀಧರ ಹೆಗಡೆ ಹಲಸರಿಗೆ ಕಾರ್ಯಕ್ರಮ ನಿರ್ವಹಿಸಿದರು. ಈ ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಪದಾಧಿಕಾರಿಗಳು, ಮತ್ತು ಕಾರ್ಯಕರ್ತರು ಹಾಜರಿದ್ದರು.
ಪ್ರಥಮ ಬಹುಮಾನ ಸುವರ್ಣ ಕೃಷ್ಣಮೂರ್ತಿ ಹೆಗಡೆ, ದ್ವಿತೀಯ ಬಹುಮಾನ ಪ್ರೇರಣಾ ಪ್ರಕಾಶ್ ಶಾನಭಾಗ್, ತೃತೀಯ ಬಹುಮಾನ ವಿನಿತಾ ವಿನಾಯಕ ಶೇಟ್ ಪಡೆದುಕೊಂಡರು. ದೇಶಭಕ್ತಿ ಗೀತೆಗಳ ಗಾಯನ ಸ್ಪರ್ಧೆಯ ನಿರ್ಣಾಯಕರಾಗಿ ಖ್ಯಾತ ಸಂಗೀತ ಕಲಾವಿದ ರವಿ ಮೂರೂರ್, ಎಂ.ಎಂ ಕಲಾ ಮತ್ತು ವಿಜ್ಞಾನ ಕಾಲೇಜಿನ ಸಂಗೀತ ಪ್ರಾಧ್ಯಾಪಕ ಗೋಪಾಲಕೃಷ್ಣ ಹೆಗಡೆ ತಾರಗೋಡ್, ಯುವ ಗಾಯಕಿ ವಸುಧಾ ಶಾಸ್ತ್ರೀ ಸೊಂದಾ ಪಾಲ್ಗೊಂಡಿದ್ದರು