• Slide
    Slide
    Slide
    previous arrow
    next arrow
  • ಕುಮಟಾದಲ್ಲಿ ಬಿಜೆಪಿ-ಜೆಡಿಎಸ್ ನಡುವೆ ತೀವ್ರ ಪೈಪೋಟಿ: ಗೆಲುವು ಯಾರಿಗೆ!!??

    300x250 AD

    ಕುಮಟಾ: ಮೇ 10ರಂದು ನಡೆದ ಕುಮಟಾ- ಹೊನ್ನಾವರ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ನೇರ ಹಣಾಹಣಿ ನಡೆದಿದ್ದು, ಇವರಿಬ್ಬರಲ್ಲಿ ಯಾರು ಗೆಲ್ಲುತ್ತಾರೆಂಬುದರ ಬಗ್ಗೆ ಕ್ಷೇತ್ರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

    ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ ಬಗ್ಗೆ ಎಲ್ಲೆಡೆ ಚರ್ಚೆ ನಡೆದಿತ್ತು. ಆದರೆ ಮತದಾನಕ್ಕೂ ಎರಡು ದಿನದ ಮೊದಲು ಕಾಂಗ್ರೆಸ್‌ಗೆ ಬೂತ್ ಮಟ್ಟದದಲ್ಲಿ ಪ್ರಾಮಾಣಿಕ ಮುಖಂಡರ ಕೊರತೆಯಾದ ಕಾರಣ ಕಾರ್ಯಕರ್ತರನ್ನು ಮತ್ತು ಮತದಾರರನ್ನು ತಲುಪುವಲ್ಲಿ ಕಾಂಗ್ರೆಸ್ ವಿಫಲವಾದಂತಿದೆ. ಹಾಗಾಗಿ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ತೀವ್ರ ಪೈಪೋಟಿ ನಡೆದಿದೆ.

    300x250 AD

    ಬಿಜೆಪಿ ಅಭ್ಯರ್ಥಿ ದಿನಕರ ಶೆಟ್ಟಿ ಎರಡು ಅವಧಿಗೆ ಶಾಸಕರಾದವರು. ಕಳೆದ ಅವಧಿಯಲ್ಲಿ ಬಿಜೆಪಿ ಸರ್ಕಾರ ಇದ್ದಿದ್ದರಿಂದ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಕ್ಷೇತ್ರದಲ್ಲಿ ಮತದಾರರ ಒಲವನ್ನು ಗಳಿಸಿದ್ದರು. ಅಲ್ಲದೇ ಕ್ಷೇತ್ರದಲ್ಲಿ ಬಿಜೆಪಿ ಪ್ರಾಬಲ್ಯ ಜಾಸ್ತಿಯಿರುವುದರಿಂದ ಕ್ಷೇತ್ರದಲ್ಲಿ ಬಿಜೆಪಿಗೂ ಒಳ್ಳೆಯ ಮತದಾನ ನಡೆದಿದೆ ಎನ್ನಲಾಗುತ್ತಿದೆ. ಇನ್ನು ಜೆಡಿಎಸ್ ಅಭ್ಯರ್ಥಿ ಸೂರಜ್ ನಾಯ್ಕ ಸೋನಿ ಅವರು ಸಾಮಾಜಿಕ ಹೋರಾಟಗಳ ಮೂಲಕ ಕ್ಷೇತ್ರದಲ್ಲಿ ಗುರುತಿಸಿಕೊಂಡವರು. ಕಳೆದೆರಡು ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಸೋತಿದ್ದರೂ ಕ್ಷೇತ್ರದಲ್ಲಿ ಸಕ್ರಿಯವಾಗಿದ್ದು, ಜನಪರ ಕಾಳಜಿ ಮೆರೆದಿದ್ದರಿಂದ ಕ್ಷೇತ್ರದಲ್ಲಿ ಅವರಪರ ಅನುಕಂಪದ ಅಲೆ ಸೃಷ್ಟಿಯಾಗಿತ್ತು. ಕ್ಷೇತ್ರದಲ್ಲಿ ಬದಲಾವಣೆ ಬಯಸಿದ್ದ ಮತದಾರರು ಜೆಡಿಎಸ್‌ನ್ನು ಬೆಂಬಲಿಸಿದ್ದರಿಂದ ಸೋನಿ ಅವರಿಗೂ ಕೂಡ ಒಳ್ಳೆಯ ಪ್ರಮಾಣದಲ್ಲಿಯೇ ಮತ ಬಿದ್ದಿದೆ ಎನ್ನಲಾಗುತ್ತಿದೆ.
    ಇನ್ನು ಕಾಂಗ್ರೆಸ್ ಕಾರ್ಯಕರ್ತರು ಕೂಡ ಜೆಡಿಎಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ಪರ ಮತ ಹಾಕಿಸುವ ಕೆಲಸ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಯಾವ ಪಕ್ಷಕ್ಕೆ ಎಷ್ಟೆಷ್ಟು ಮತವನ್ನು ಕಾಂಗ್ರೆಸ್ ಕಾರ್ಯಕರ್ತರು ನೀಡಿದ್ದಾರೆಂಬುದು ಯಕ್ಷ ಪ್ರಶ್ನೆಯಾಗಿದ್ದರಿಂದ ಬಿಜೆಪಿ ಅಥವಾ ಜೆಡಿಎಸ್ ಈ ಕ್ಷೇತ್ರದಲ್ಲಿ ಗೆಲ್ಲುವುದು ನಿಶ್ಚಿತ ಎನ್ನಲಾಗುತ್ತಿದೆ.
    ಬಿಜೆಪಿಗರ ಪ್ರಕಾರ, ಪ್ರಧಾನಿ ಮೋದಿ ಮತ್ತು ಡಬಲ್ ಇಂಜಿನ್ ಸರ್ಕಾರದ ಯೋಜನೆಗಳಿಂದ ಪ್ರಭಾವಿತರಾದ ಮತದಾರರು ಈ ಬಾರಿಯೂ ಬಿಜೆಪಿಯನ್ನೆ ಆಯ್ಕೆ ಮಾಡಿದ್ದು, ಬಿಜೆಪಿ ಅಭ್ಯರ್ಥಿ ದಿನಕರ ಶೆಟ್ಟಿ ಅವರ ಗೆಲುವು ನಿಶ್ಚಿತ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಇನ್ನು ಜೆಡಿಎಸ್ ಕಾರ್ಯಕರ್ತರ ಪ್ರಕಾರ ಸೂರಜ್ ನಾಯ್ಕ ಸೋನಿ ಅವರ ಪರ ಅನುಕಂಪದ ಅಲೆ ಕೆಲಸ ಮಾಡಿದೆ. ಕ್ಷೇತ್ರದಲ್ಲಿ ಬದಲಾವಣೆ ಬಯಿಸಿದ ಮತದಾರರೇ ಹೆಚ್ಚಾಗಿದ್ದರಿಂದ ಅವರೆಲ್ಲ ಸೋನಿಗೊಂದು ಅವಕಾಶ ನೀಡೋಣ ಎಂಬ ಮನೋಭಾವದಿಂದ ಜೆಡಿಎಸ್‌ಗೆ ಬೆಂಬಲ ಸೂಚಿಸಿದ್ದಾರೆ, ಇನ್ನು ಕಾಂಗ್ರೆಸ್ ಕಾರ್ಯಕರ್ತರು ಕೊನೆ ಘಳಿಗೆಯಲ್ಲಿ ಸೂರಜ್ ಸೋನಿ ಅವರಿಗೆ ಬೆಂಬಲ ನೀಡಿದ್ದರಿಂದ ಸೋನಿ ಗೆಲುವು ನಿಶ್ಚಿತವಾಗಿದೆ ಎಂದು ತಿಳಿಸಿದ್ದಾರೆ.
    ಒಟ್ಟಾರೆ ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಮತ್ತು ಜೆಡಿಎಸ್ ನಡುವೆಯೇ ತೀವ್ರ ಫೈಟ್ ನಡೆದಿದ್ದು, ಮೇ 13ರಂದು ನಡೆಯಲಿರುವ ಮತ ಏಣಿಕೆಯ ಫಲಿತಾಂಶದ ಬಳಿಕವೇ ಗೆಲುವು ಯಾರಿಗೆ ಎಂಬುದನ್ನು ನೋಡಬೇಕಾಗಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top