ಮುಂಡಗೋಡ: ಪಟ್ಟಣದಲ್ಲಿ ಶುಕ್ರವಾರ ಸಂಜೆ ಸುರಿದ ಮಳೆ ಗಾಳಿಗೆ ಶಿರಸಿ ರಸ್ತೆಯ ಪಿಡಬ್ಲ್ಯುಡಿ ಕಾಂಪೌಂಡ್‌ನಲ್ಲಿರುವ ಮರವೊಂದು ಉರುಳಿ ಬಿದ್ದಿದೆ.
ಗುಡುಗಿನೊಂದಿಗೆ ಆರಂಭವಾದ ಮಳೆ ಅಷ್ಟೇನೂ ಬೀಳದೆ ಗಾಳಿ ಮಾತ್ರ ತುಂಬಾ ಜೋರಾಗಿ ಬೀಸಿತು. ಗಾಳಿಯ ರಭಸಕ್ಕೆ ಮರ ಉರುಳಿ ವಿದ್ಯುತ್ ತಂತಿ ಮೇಲೆ ಬಿದ್ದು ಕೆಲ ಹೊತ್ತು ವಿದ್ಯುತ್ ವ್ಯತ್ಯಯ ಉಂಟಾಯಿತು. ಹೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ದುರಸ್ತಿ ಮಾಡಿದರು. ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ.