• Slide
    Slide
    Slide
    previous arrow
    next arrow
  • ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    300x250 AD

    ಕಾರವಾರ: ಜಿಲ್ಲೆಯಲ್ಲಿ ಇಂಜಿನಿಯರಿ0ಗ್, ಕೃಷಿ ವಿಜ್ಞಾನ, ವೆಟರಿನರಿ, ಫಾರ್ಮಸಿ, ಬಿ.ಎಸ್.ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ 2023ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಮೇ 29 ಮತ್ತು 31ರಂದು ನಡೆಯಲಿದೆ.

    ಪರೀಕ್ಷೆಗಳನ್ನು ಜಿಲ್ಲೆಯ ದಾಂಡೇಲಿ ತಾಲೂಕಿನ ಬಂಗೂರನಗರ ಕಾಂಪೋಸಿಟ್ ಪಿಯು ಕಾಲೇಜು, ಕಾರವಾರ ತಾಲೂಕಿನ ಸರ್ಕಾರಿ ಪಿಯು ಕಾಲೇಜು, ಶಿವಾಜಿ ಪಿಯು ಕಾಲೇಜು ಹಾಗೂ ಪ್ರಿಮಿಯರ್ ಸೈನ್ಸ್ ಆ್ಯಂಡ್ ಕಾಮರ್ಸ್ ಪಿಯು ಕಾಲೇಜು, ಕುಮಟಾ ತಾಲೂಕಿನ ಡಾ.ಎವಿ ಬಾಳಿಗಾ ಪಿಯು ಕಾಲೇಜು ಹಾಗೂ ಸರ್ಕಾರಿ ಹನುಮಂತ ಬೆಣ್ಣೆ ಪಿಯು ಕಾಲೇಜು ಹಾಗೂ ಶಿರಸಿ ತಾಲೂಕಿನ ಎಂಇಎಸ್ ಚೈತನ್ಯಾ ಪಿಯು ಕಾಲೇಜು, ಶ್ರೀ ಮಾರಿಕಾಂಬಾ ಸರ್ಕಾರಿ ಪಿಯು ಕಾಲೇಜು ಹಾಗೂ ಎಂಇಎಸ್ ಪಿಯು ಕಾಲೇಜುಗಳಲ್ಲಿ ನಡೆಯಲಿದೆ. ಈ ಮೇಲಿನ ಸಿಇಟಿ-2023 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಯಾವುದೇ ತರಹದ ಅವ್ಯವಹಾರ ಕಾನೂನು ಬಾಹಿರ ಚಟುವಟಿಕೆಗಳು ಅಥವಾ ಶಾಂತಿಭ0ಗ ಆಗದಂತೆ ಪರೀಕ್ಷಾ ಕೇಂದ್ರದ ಸುತ್ತಮುತ್ತ ಸಭೆ ಸಮಾರಂಭಗಳನ್ನು ನಡೆಯುತ್ತಿದ್ದಲ್ಲಿ ಧ್ವನಿವರ್ಧಕಗಳನ್ನು ತಡೆಯುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮೇ 20 ಮತ್ತು 31ರಂದು ಪರೀಕ್ಷಾ ಸಮಯದಿಂದ ಪರೀಕ್ಷಾ ಅವಧಿ ಮುಕ್ತಾಯವಾಗುವವರೆಗೆ ಸದರಿ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ. ಕಾಯ್ದೆಯ ಕಲಂ 144 ರಂತ ನಿಷೇಧಾಜ್ಞೆಯನ್ನು ಹೊರಡಿಸಿದ್ದಾರೆ.
    ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿರುವ ಝರಾಕ್ಸ್ ಅಂಗಡಿ ಹಾಗೂ ಸೈಬರ್ ಕೆಫೆಗಳನ್ನು ಪರೀಕ್ಷಾವಧಿಯಲ್ಲಿ ಮುಚ್ಚುವಂತೆ ನೋಡಿಕೊಳ್ಳತಕ್ಕದ್ದು, ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳಿಗೆ ಇಲೆಕ್ಟ್ರಾನಿಕ್ಸ್ ವಸ್ತುಗಳು ವೈರ್‌ಲೆಸ್/ ಬ್ಲೂಟೂಥ್, ಈಯರ್ ಹೆಡ್ ಫೋನ್‌ಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top