ಕುಮಟಾ: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶುಕ್ರವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾಗಿ, ಕುಶಲೋಪರಿ ವಿಚಾರಿಸಿದರು.
ತಾಲೂಕಿನಲ್ಲಿ ನೆರೆಯಿಂದಾಗಿ ಸಾಕಷ್ಟು ಹಾನಿಯಾಗಿದ್ದು, ಹಾನಿಯ ಪ್ರಮಾಣ ಹಾಗೂ ವಿವರಗಳನ್ನು ಶೀಘ್ರವಾಗಿ ಸಮೀಕ್ಷೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಈ ವೇಳೆ ತಹಸೀಲ್ದಾರ ಅವರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಶಾಸಕ ದಿನಕರ ಶೆಟ್ಟಿ, ಬಿಜೆಪಿ ಮಂಡಳಾಧ್ಯಕ್ಷ ಹೇಮಂತಕುಮಾರ ಗಾಂವಕರ, ಪ್ರಧಾನ ಕಾರ್ಯದರ್ಶಿ ಜಿ.ಐ.ಹೆಗಡೆ, ಪ್ರಮುಖರಾದ ಕುಮಾರ ಕವರಿ, ಗಜಾನನ ಗುನಗಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.