• Slide
    Slide
    Slide
    previous arrow
    next arrow
  • ಮೇ.20ರಿಂದ ಬೇಸಿಗೆ ಶಿಬಿರ

    300x250 AD

    ಕಾರವಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸೊಸೈಟಿಯ ಸಯೋಗದಲ್ಲಿ 5ರಿಂದ 16 ವರ್ಷ ವಯೋಮಾನದ ಮಕ್ಕಳಿಗಾಗಿ ಮೇ 20ರಿಂದ ಜೂ.4ವರೆಗೆ ಬೆಳಿಗ್ಗೆ 9ರಿಂದ ಮಧ್ಯಾಹ್ನ 12.30ರವರೆಗೆ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ.
    ಕಾರ್ಯಕ್ರಮವು ನೃತ್ಯ, ಯೋಗ, ಸಮೂಹ ಗೀತೆ, ಕಸದಿಂದ ರಸ, ಚಿತ್ರಕಲೆ, ಕರಾಟೆ, ಕರಕುಶಲೆ, ಇತ್ಯಾದಿ ಚಟುವಟಿಕೆ ಕಾರ್ಯಕ್ರಮ ಮಾಡಲಾಗುತ್ತದೆ.

    ಈ ಶಿಬಿರದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಳ್ಳುತ್ತಿದ್ದಾರೆ. ಶಿಬಿರಕ್ಕೆ ಮಕ್ಕಳನ್ನು ಕಳುಹಿಸಲಿಚ್ಚಿಸುವ ಪಾಲಕರು ನಿಗದಿತವಾದ ನಮೂನೆಯನ್ನು ಉಪನಿರ್ದೇಶಕರ ಕಛೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಮೇ 20 ರೊಳಗಾಗಿ ಬೆಳಿಗ್ಗೆ 9.30 ಗಂಟೆಯೊಳಗೆ ಕಚೇರಿಗೆ ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಿ ಪ್ರವೇಶವನ್ನು ಪಡೆದುಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top