• Slide
    Slide
    Slide
    previous arrow
    next arrow
  • ಕಾರವಾರ ಶಹರದಲ್ಲಿ ಸಂಚಾರ ನಿರ್ವಹಣಾ ಕೇಂದ್ರ ಉದ್ಘಾಟನೆ

    300x250 AD

    ಕಾರವಾರ: ಬೆಂಗಳೂರು ನಗರದ ಮಾದರಿಯಲ್ಲಿ ಸಾರ್ವಜನಿಕ ವಾಹನ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಸಂಚಾರ ನಿರ್ವಹಣಾ ಕೇಂದ್ರವನ್ನು ಕಾರವಾರ ಸಂಚಾರ ಪೆÇಲೀಸ್ ಠಾಣೆಯಲ್ಲಿ ಇಂದು ಚಾಲನೆಗೊಳಿಸಿರುತ್ತೇನೆ.

    ನಗರದಲ್ಲಿ ವಾಹನಗಳ ಸಂಚಾರ ದಟ್ಟಣೆ ಹೆಚ್ಚಾಗಿದ್ದು ಸಾರ್ವಜನಿಕರಿಗೆ ಸುರಕ್ಷಿತ ಮತ್ತು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ನಗರದ ಪ್ರಮುಖ ವೃತ್ತಗಳಲ್ಲಿ ಅತ್ಯಾಧುನಿಕ 360 ಡಿಗ್ರಿಯಲ್ಲಿ ತಿರುಗುವ ಹೈ ರೆಸೂಲೆಷನ್ ಸಿಸಿ ಕ್ಯಾಮೆರಾಗಳನ್ನು ಮತ್ತು ವಾಹನ ಸವಾರರಿಗೆ ಸೂಚನೆಗಳನ್ನು ನೀಡಲು ಧ್ವನಿವರ್ಧಕಗಳನ್ನು ಅಳವಡಿಸಲಾಗಿದ್ದು ನಿರ್ವಹಣಾ ಕೇಂದ್ರದಿಂದಲೇ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲಾಗುತ್ತದೆ ಹಾಗೂ ವಾಹನ ಸವಾರರಿಗೆ ಸೂಚನೆಗಳನ್ನು ಸಹ ನೀಡಲಾಗುತ್ತದೆ.

    300x250 AD

    ನಿರ್ವಹಣಾ ಕೇಂದ್ರಕ್ಕೆ ಪ್ರತ್ಯೆಕ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದ್ದು ದಿನದ 24 ಗಂಟೆಗಳ ಕಾಲ ಸಂಚಾರ ದಟ್ಟಣೆ ಮತ್ತು ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನಗಳ ಮೇಲೆ ಕಣ್ಗಾವಲು ಇಡಲಾಗುತ್ತದೆ ಮತ್ತು ನಿಯಮ ಉಲ್ಲಂಘಿಸುವ ವಾಹನಗಳ ಪೆÇಟೋಗಳನ್ನು ತೆಗೆದುಕೊಂಡು ಮನೆಗಳಿಗೆ ನೊಟೀಸ್ ಕಳುಹಿಸಲಾಗುತ್ತದೆ ಹಾಗೂ ವೃತ್ತಗಳಲ್ಲಿ ಕರ್ತವ್ಯ ನಿರ್ವಹಿಸುವ ಸಂಚಾರ ಸಿಬ್ಬಂದಿಯವರಿಗೆ ಈ ಕೇಂದ್ರದಿಂದಲೇ ಸೂಚನೆ ನೀಡಲು ಅನುಕೂಲವಾಗಿರುತ್ತದೆ.

    Share This
    300x250 AD
    300x250 AD
    300x250 AD
    Leaderboard Ad
    Back to top