ಯಲ್ಲಾಪುರ: ಪಟ್ಟಣದ ಅರಣ್ಯ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಇಂದು ಯಲ್ಲಾಪುರ ಮತ್ತು ಮುಂಡಗೋಡದಲ್ಲಿ ‘ನಿವೇಶನ ರಹಿತ ಹಾಗೂ ವಸತಿ ರಹಿತ’ ಬಡ ಕುಟುಂಬಗಳಿಗೆ ವಸತಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ.ಪಂ ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ಕಾರ್ಮಿಕ ಖಾತೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಸಭೆ ನಡೆಸಿದರು.
ಶೀಘ್ರವಾಗಿ ವಸತಿ ರಹಿತ ಫಲಾನುಭವಿಗಳ ಪಟ್ಟಿಯನ್ನು ಅಂತಿಮಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು, ಕ್ಷೇತ್ರದ ಬಡ ಜನರು ಸಹ ಒಂದು ಸೂರಿನಲ್ಲಿ ಸಂತೋಷದಿಂದ ಜೀವನ ಸಾಗಿಸಬೇಕು ಎಂಬುವುದೆ ನನ್ನ ಗುರಿ ಎಂದರು.
ಈ ಸಂದರ್ಭದಲ್ಲಿ ಮುಂಡಗೋಡ ಹಾಗೂ ಯಲ್ಲಾಪುರದ ಪಟ್ಟಣ ಪಂಚಾಯತದ ಮುಖ್ಯಾಧಿಕಾರಿಗಳು, ಪ.ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಜರಿದ್ದರು.