Slide
Slide
Slide
previous arrow
next arrow

ಆರ್‌ಎಫ್‌ಒಗಳೊಂದಿಗೆ ಸಿಇಒ ನರೇಗಾ ಪ್ರಗತಿ ಪರಿಶೀಲನಾ ಸಭೆ

300x250 AD

ಕಾರವಾರ: ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿಯೇ ಅತಿ ಹೆಚ್ಚು ಅರಣ್ಯ ಪ್ರದೇಶ ಒಳಗೊಂಡಿದ್ದು, ಜಿಲ್ಲೆಯ ಪ್ರಾದೇಶಿಕ ಹಾಗೂ ಸಾಮಾಜಿಕ ಅರಣ್ಯ ಇಲಾಖೆಯ ಎಲ್ಲಾ ವಲಯ ಅರಣ್ಯಾಧಿಕಾರಿಗಳು ಮಹಾತ್ಮಗಾಂಧಿ ನರೇಗಾ ಯೋಜನೆಯ ಒಗ್ಗೂಡಿಸುವಿಕೆಯಡಿ ಆದ್ಯತೆಯ ಮೇರೆಗೆ ನೈಸರ್ಗಿಕ ಸಂಪನ್ಮೂಲ ಆಧಾರಿತ ಕಾಮಗಾರಿಗಳನ್ನು ತೆಗೆದುಕೊಂಡು ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಿಂದ ನಿಗದಿಪಡಿಸಲಾದ 3,38,105 ಮಾನವ ದಿನಗಳನ್ನು ಸೃಜಿಸುವ ಮೂಲಕ ನಿಗದಿತ ಗುರಿ ಸಾಧಿಸಬೇಕು ಎಂದು ಜಿಲ್ಲಾ ಪಂಚಾಯತ್‌ನ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಖಂಡೂ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್‌ನ ಕೇಸ್ವಾನ್ ಹಾಲ್‌ನಲ್ಲಿ ಶುಕ್ರವಾರ ಜಿಲ್ಲೆಯ ಎಲ್ಲಾ ವಲಯ ಅರಣ್ಯಾಧಿಕಾರಿಗಳೊಂದಿಗೆ ನರೇಗಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ನೈಸರ್ಗಿಕ ಸಂಪನ್ಮೂಲ ಆಧಾರಿತ ಕಾಮಗಾರಿಗಳಿಗೆ ಹೆಚ್ಚಿನ ಬೇಡಿಕೆಯಿದೆ. ಆ ಕಾರಣದಿಂದಲೇ ಪ್ರತಿವರ್ಷ ಆಯುಕ್ತಾಲಯದ ನಿಗದಿತ ಗುರಿಯನ್ನ ಜಿಲ್ಲೆಯಲ್ಲಿ ಸಾಧಿಸಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಪ್ರಗತಿಯ ಸಾಧನೆ ಸ್ವಲ್ಪ ಕುಂಠಿತವಾಗಿದೆ. ಹೀಗಾಗಿ ಜಿಲ್ಲೆಯ ಎಲ್ಲಾ ವಲಯ ಅರಣ್ಯಾಧಿಕಾರಿಗಳು ತಾಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಗಳು, ನರೇಗಾ ಸಹಾಯಕ ನಿರ್ದೇಶಕರು ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿಕೊಂಡು ಜನರಿಗೆ ಅಗತ್ಯವಿರುವ ಉತ್ತಮ ಕಾಮಗಾರಿ ತೆಗೆದುಕೊಂಡು ವಲಯವಾರು ನಿಗದಿಪಡಿಸಲಾದ ಗುರಿ ಸಾಧಿಸಬೇಕು. ಜೊತೆಗೆ ಇನ್ನೂ ಹೆಚ್ಚಿನದಾಗಿ ಯಾವೆಲ್ಲ ಕಾಮಗಾರಿಗಳನ್ನ ತೆಗೆದುಕೊಳ್ಳಬಹುದು ಎಂಬ ಪಟ್ಟಿಯನ್ನ ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯತಿಗೆ ಸಲ್ಲಿಸಿ ಅನುಮೋದನೆ ಪಡೆಯಬಹುದಾಗಿದೆ ಎಂದರು.
ನರೇಗಾ ಯೋಜನೆಯ ಜವಾಬ್ದಾರಿ ವಹಿಸಿಕೊಂಡಿರುವ ಜಿಲ್ಲಾ ಪಂಚಾಯತ್‌ನ ಯೋಜನಾ ನಿರ್ದೇಶಕರಾದ ಕರೀಂ ಅಸಾದಿ ಅವರು ಮಾತನಾಡಿ, ಆಯುಕ್ತಾಲಯದಿಂದ ಗ್ರಾಮೀಣ ಮಟ್ಟದಲ್ಲಿ ನೈಸರ್ಗಿಕ ಸಂಪನ್ಮೂಲ ಆಧಾರಿತ ಕಾಮಗಾರಿಗಳನ್ನು ತೆಗೆದುಕೊಳ್ಳಲು ಉತ್ತಮ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಜಿಲ್ಲೆಯ ಎಲ್ಲಾ ವಲಯ ಅರಣ್ಯಾಧಿಕಾರಿಗಳು ಹೆಚ್ಚಿನ ಆಸಕ್ತಿವಹಿಸಿ ನರೇಗಾದಡಿ ಟ್ರಂಚ್, ಇಂಗು ಗುಂಡಿ, ನರ್ಸರಿ ಅಭಿವೃದ್ಧಿ, ಅರಣ್ಣೀಕರಣ, ಕೆರೆ ಅಭಿವೃದ್ಧಿ ಹಾಗೂ ಮಣ್ಣು ಮತ್ತು ತೇವಾಂಶ ಸಂರಕ್ಷಣೆಯAತಹ ಕಾಮಗಾರಿ ಕೈಗೊಳ್ಳಬೇಕು. ಇದರಿಂದ ನೈಸರ್ಗಿಕ ಸಂಪನ್ಮೂಲಗಳ ನಿರ್ವಹಣೆ ಸುಲಭವಾಗುತ್ತದೆ ಎಂದು ತಿಳಿಸಿದರು.
ಪ್ರಗತಿ ಪರಿಶೀಲನಾ ಸಭೆಗೂ ಮುನ್ನ ಎಲ್ಲ ವಲಯ ಅರಣ್ಯಾಧಿಕಾರಿಗಳಿಗೆ ನರೇಗಾ ಯೋಜನೆಯ ಬಗ್ಗೆ ಓರಿಯಂಟೇಶನ್ ಮೂಲಕ ವಿವರವಾಗಿ ತಿಳಿಸಿಕೊಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲೆಯ ಪ್ರಾದೇಶಿಕ ಹಾಗೂ ಸಾಮಾಜಿಕ ಅರಣ್ಯ ಇಲಾಖೆಯ ಎಲ್ಲಾ ವಲಯ ಅರಣ್ಯಾಧಿಕಾರಿಗಳು, ಜಿಲ್ಲಾ ಪಂಚಾಯತ್‌ನ ಎಡಿಪಿಸಿ, ಡಿಎಂಐಎಸ್, ಡಿಐಇಸಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top