ಕಾರವಾರ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2023- 24ನೇ ಸಾಲಿನ ರಾಜ್ಯಮಟ್ಟದ ಸಮಿತಿಯಿಂದ ಮಾನ್ಯತೆ ನೀಡಲಾದ ಶಾಲೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ 6ನೇ ತರಗತಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದವರಾಗಿರಬೇಕು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು, ಆರ್.ಡಿ ಸಂಖ್ಯೆ ಹೊಂದಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಮಾಣ ಪತ್ರವನ್ನು ಹೊಂದಿರಬೇಕು, 2022-23 ನೇ ಸಾಲಿನ 5 ನೇ ತರಗತಿಯಲ್ಲಿ ಶೇಕಡಾ 60% ಅಂಕ ಪಡೆದಿರಬೇಕು 5 ನೇ ತರಗತಿಯ ಅಂಕಪಟ್ಟಿ ಕಡ್ಡಾಯವಾಗಿ ಎಸ್‌ಎಟಿಎಸ್‌ನಲ್ಲಿ ನಮೂದು ಮಾಡಿದ ದೃಢೀಕೃತ ಪ್ರತಿಯನ್ನು ಲಗತ್ತಿಸಬೇಕು, ವಿದ್ಯಾರ್ಥಿಯ ಕುಟುಂಬದ ಆದಾಯ ಮಿತಿ 2.50 ಲಕ್ಷದೊಳಗಿರಬೇಕು, ತಹಶೀಲ್ದಾರರಿಂದ ಪಡೆದ ಇತ್ತೀಚಿನ ಆದಾಯ ಪ್ರಮಾಣ ಪತ್ರದ ದೃಢೀಕೃತ ಪತ್ರ ಲಗತ್ತಿಸಬೇಕು, ಒಂದು ಕುಟುಂಬದಲ್ಲಿ ಎರಡು ಮಕ್ಕಳಿಗೆ ಮಾತ್ರ ಅವಕಾಶವಿರುತ್ತದೆ ಒಂದು ಬಾಲಕ ಮತ್ತು ಬಾಲಕಿಗೆ ಅವಕಾಶ ನೀಡಲಾಗುವುದು.
ಆಸಕ್ತ ವಿದ್ಯಾರ್ಥಿಗಳು ಮೇ 25 ರೊಳಗೆ ಆಯಾ ತಾಲೂಕಿನ ಸಂಬಂಧಪಟ್ಟ ಸಹಾಯಕ ನಿರ್ದೇಶಕರು ಗ್ರೇಡ್ -1&2 ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08382-226514, 08382-226575 ಅಥವಾ ಆಯಾ ತಾಲೂಕಿನ ಸಂಬಂಧಪಟ್ಟ ಸಮಾಜ ಕಲ್ಯಾಣ ಇಲಾಖೆಗೆ ಸಂಪರ್ಕಿಸಿ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ
