ಮುಂಡಗೊಡ: ತಾಲೂಕಿನಲ್ಲಿ ಇನ್ನು 15 ದಿನ ಮಳೆಯಾಗದಿದ್ದರೆ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಉದ್ಭವ ಆಗುತ್ತದೆ. ಏನಾದರೂ ಸರಿ, ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಶಾಸಕ ಶಿವರಾಮ ಹೆಬ್ಬಾರ್ ಖಡಕ್ ಸೂಚನೆ ನೀಡಿದರು.
ತಾಲೂಕ ಪಂಚಾಯತ ಸಭಾಭವನದಲ್ಲಿ ತಾಲೂಕ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು, ನೀರಿನ ಸಮಸ್ಯ ನಿಭಾಯಿಸುವ ನಿಟ್ಟಿನಲ್ಲಿ ದುಡಿಯಬೇಕೆಂದರು. ತಾಲೂಕಿನ ಕೆಲ ಗ್ರಾಮೀಣ ಭಾಗಗಳಲ್ಲಿ ಈಗಾಗಲೇ ಕುಡಿಯುವ ನೀರು ಸಿಗದೆ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ. ಕೊಳವೆ ಬಾವಿ ಹಾಗೂ ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಆಯಾ ಪಂಚಾಯತ್ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿರುವುದಾಗಿ ಶಾಸಕರಿಗೆ ಮಾಹಿತಿ ನೀಡಿದರು. ಆದೇಶಿಸಿರುವ ಕೆರೆಗಳನ್ನು ದುರಸ್ತಿ ಕಾರ್ಯ ಪ್ರಾರಂಭಿಸಬೇಕು ಎಂದು ಫೋನ್ ಮುಖಾಂತರ ಕಾರ್ಯನಿರ್ವಾಹಕ ಎಂಜನಿಯರ್‌ಗೆ ಸೂಚಿದರು.
ಈ ವೇಳೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ ಕಟ್ಟಿ, ತಹಶೀಲ್ದಾರ್ ಶಂಕರ ಗೌಡಿ, ಸಿಪಿಐ ಸಿದ್ದಪ್ಪ ಸಿಮಾನಿ, ಎಇಇ ಹೆಸ್ಕಾಂ ಇಲಾಖೆ ಪೇಟಕರ, ಕು.ನೀ.ಸ. ಹಾಗೂ ನೈರ್ಮಲ್ಯ ಇಲಾಖೆ ಎಇಇ ರಾಜೇಶ್ವರಿ ಕದಂ, ವಲಯ ಅರಣ್ಯಾಧಿಕಾರಿ ಸುರೇಶ ಕುಳ್ಳೊಳ್ಳಿ ಮುಂತಾದವರಿದ್ದರು.