Slide
Slide
Slide
previous arrow
next arrow

ಮೇ.22ರಿಂದ ಗ್ರಾಮ ಆರೋಗ್ಯ ಅಭಿಯಾನ: ಸಿಇಒ ಈಶ್ವರ ಖಂಡೂ

300x250 AD

ಕಾರವಾರ: ಗ್ರಾಮೀಣ ಪ್ರದೇಶದಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯ ಕಾಮಗಾರಿಗಳಲ್ಲಿ ಶ್ರಮಿಸುತ್ತಿರುವ ದುಡಿಯುವ ಹೆಚ್ಚಿನ ಕೂಲಿಕಾರರಿಗೆ ಆರೋಗ್ಯ ಸೇವೆ ಒದಗಿಸುವ ಮೂಲಕ ಆರೋಗ್ಯ ತಪಾಸಣೆ ನಡೆಸುವ ಉದ್ದೇಶದಿಂದ ಗ್ರಾಮ ಪಂಚಾಯತಿ ಆರೋಗ್ಯ ಅಮೃತ ಅಭಿಯಾನದಡಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯ ನರೇಗಾ ಕಾಮಗಾರಿ ಸ್ಥಳಗಳಲ್ಲಿ ಮೇ 22ರಿಂದ ಜೂನ್ 22ರವರೆಗೆ ಒಂದು ತಿಂಗಳ ಕಾಲ ಗ್ರಾಮ ಆರೋಗ್ಯ ಅಭಿಯಾನ ಜರುಗಲಿದ್ದು, ಮಹಾತ್ಮಗಾಂಧಿ ನರೇಗಾ ಯೋಜನೆಯ ಉದ್ಯೋಗ ಚೀಟಿ ಹೊಂದಿರುವ ಪ್ರತಿಯೊಬ್ಬ ಕೂಲಿಕಾರರು ಅಭಿಯಾನದಡಿ ಹೆಲ್ತ್ ಸ್ಕ್ರೀನ್ ಮಾಡಿಸಿಕೊಂಡು ಆರೋಗ್ಯಯುತ ಜೀವನಕ್ಕೆ ಆದ್ಯತೆಭ ನೀಡುವಂತೆ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಖಂಡೂ ಜಿಲ್ಲೆಯ ಎಲ್ಲ ನರೇಗಾ ಕೂಲಿಕಾರರಲ್ಲಿ ಮನವಿ ಮಾಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಆರಂಭಿಸಿರುವ ಗ್ರಾಮ ಪಂಚಾಯತಿ ಆರೋಗ್ಯ ಅಮೃತ ಅಭಿಯಾನವನ್ನು ಜಿಲ್ಲಾ ಪಂಚಾಯತ್, ಜಿಲ್ಲಾ ಹಾಗೂ ತಾಲ್ಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಹಾಗೂ ಗ್ರಾಮ ಪಂಚಾಯತಿ ಸಹಯೋದಲ್ಲಿ ಈಗಾಗಲೇ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿ ಮಟ್ಟದಲ್ಲಿ ಮಹಾತ್ಮಗಾಂಧಿ ನರೇಗಾ ಕೂಲಿಕಾರರ ಆರೋಗ್ಯ ತಪಾಸಣೆ(ಹೆಲ್ತ್ ಸ್ಕ್ರೀನ್) ನಡೆಸಲಾಗುತ್ತಿದೆ. ಆದಾಗ್ಯೂ ಗ್ರಾಮ ಮಟ್ಟದ ಇನ್ನೂ ಹೆಚ್ಚಿನ ನರೇಗಾ ಕೂಲಿಕಾರರಿಗೆ ಆರೋಗ್ಯ ಸೇವೆಯನ್ನು ವಿಸ್ತರಿಸುವ ಸಲುವಾಗಿ 22 ಮೇ 2023 ರಿಂದ ಒಂದು ತಿಂಗಳ ಕಾಲ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಆರೋಗ್ಯ ಅಭಿಯಾನವನ್ನು ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಆದೇಶದಂತೆ ಆಯೋಜಿಸಲಾಗುತ್ತಿದೆ. ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದು ಕರೆನೀಡಿದ್ದಾರೆ.

ಹಳ್ಳಿಗಾಡು ಬಡ ಕೂಲಿಕಾರ ಜನರ ಆರೋಗ್ಯದ ಹಿತದೃಷ್ಟಿಯಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ಕಾರ್ಯಕ್ಕೆ ಮುಂದಾಗಿದೆ. ಹೀಗಾಗಿ ಜಿಲ್ಲೆಯ ಎಲ್ಲ ತಾಲ್ಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಗಳು, ನರೇಗಾ ಸಹಾಯಕ ನಿರ್ದೇಶಕರು, ನರೇಗಾ ಸಿಬ್ಬಂದಿ ಹಾಗೂ ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ, ನರೇಗಾ ಕಾಯಕ ಬಂಧುಗಳು ಹೆಚ್ಚಿನ ಮುತುವರ್ಜಿ ವಹಿಸಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಸಮನ್ವತೆ ಸಾಧಿಸಿಕೊಂಡು ಕಾರ್ಯ ನಿರ್ವಹಿಸಬೇಕು. ಜೊತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿಕಾರರು ಇರುವಂತಹ ಪಿಡಿಒಗಳು ನರೇಗಾ ಸಮುದಾಯ ಕಾಮಗಾರಿ ಸ್ಥಳಗಳನ್ನು ಗುರುತಿಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲ ನರೇಗಾ ಉದ್ಯೋಗ ಚೀಟಿ ಹೊಂದಿದ ಕೂಲಿಕಾರರಿಗೆ ಆರೋಗ್ಯ ಸೇವೆ ತಲಪುವ ಹಾಗೆ ವೇಳಾಪಟ್ಟಿ ತಯಾರಿಸಿಕೊಂಡು ಗ್ರಾಮ ಆರೋಗ್ಯ ಹೆಲ್ತ್ ಸ್ಕ್ರೀನ್ ಕಾರ್ಯಕ್ರಮ ಆಯೋಜಿಸಬೇಕು ಎಂದು ಅವರು ಸೂಚಿಸಿದ್ದಾರೆ.

300x250 AD


ಗ್ರಾಮ ಪಂಚಾಯತಿಗಳಿಗೆ ಕಿಟ್
ಗ್ರಾಮೀಣ ಭಾಗದ ಜನರ ಆರೋಗ್ಯ ಸಮಸ್ಯೆಗಳ ನಿವಾರಣೆಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಗ್ರಾಮ ಪಂಚಾಯತಿ ಅಮೃತ ಆರೋಗ್ಯ ಅಭಿಯಾನದಡಿ ಈಗಾಗಲೇ ಗ್ರಾಮ ಪಂಚಾಯತಿವಾರು ಹೆಲ್ತ್ ಸ್ಕ್ರೀನ್ ಕಿಟ್‌ಗಳನ್ನು ವಿತರಿಸಲಾಗಿದೆ. ಈ ಕಿಟ್ ಬಳಿಸಿಕೊಂಡು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಜನರ ಹಾಗೂ ಕೂಲಿಕಾರರ ಆರೋಗ್ಯ ತಪಾಸಣೆ ಕಾರ್ಯ ಕೈಗೊಂಡಿದ್ದಾರೆ.

ಮಹಾತ್ಮಗಾಂಧಿ ನರೇಗಾದಡಿ ಕೂಲಿ ಮಾಡಿ ಬದುಕುವ ಕೂಲಿಕಾರರನ್ನೇ ಗುರಿಯಾಗಿಸಿಕೊಂಡು ಆಯೋಜಿಸಲಾಗುತ್ತಿರುವ ಈ ಗ್ರಾಮ ಆರೋಗ್ಯ ಅಭಿಯಾನದಲ್ಲಿ ಅಪೌಷ್ಟಿಕತೆ, ಟಿಬಿ ಸ್ಕ್ರೀನಿಂಗ್, ರಕ್ತಹೀನತೆ, ಮಾನಸಿಕ ಆರೋಗ್ಯ, ರಕ್ತದೊತ್ತಡದಂತಹ ಆರೋಗ್ಯ ಸಮಸ್ಯೆಗಳ ತಪಾಸಣೆಗಳನ್ನು ಮಾಡಲಾಗುತ್ತಿದೆ. ಜೊತೆಗೆ ಒಂದು ವೇಳೆ ಈ ಮೆರಲಿನ ಯಾವುದಾದರೂ ಕಾಯಿಲೆ ಕಂಡುಬಂದಲ್ಲಿ ಆರೋಗ್ಯದ ಸ್ಥಿತಿಗತಿ ಆಧಾರದ ಮೇಲೆ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಿಗೆ ಕಳುಹಿಸಿ ಉನ್ನತ ಮಟ್ಟದ ವೈದ್ಯಾಧಿಕಾರಿಗಳಿಂದ ಸೂಕ್ತ ಚಿಕಿತ್ಸೆ ಕೊಡಿಸಲು ಅವಕಾಶವಿದೆ.

Share This
300x250 AD
300x250 AD
300x250 AD
Back to top