ಕಾರವಾರ: ಜಿಲ್ಲೆಯಲ್ಲಿ ಆ. 23 ಸೋಮವಾರದಂದು 35,300 ಡೋಸ್ ಕೋವಿಶಿಲ್ಡ್ ಹಾಗೂ 4,900 ಡೋಸ್ ಕೋವ್ಯಾಕ್ಸಿನ್ ಲಸಿಕೆ ಲಭ್ಯವಾಗಲಿದ್ದು, ಜಿಲ್ಲೆಯ ಎಲ್ಲಾ ಆರೋಗ್ಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಲಸಿಕಾ ವಿತರಣಾ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಕಾರ್ಯಕ್ರಮದಲ್ಲಿ 2ನೇ ಡೋಸ್ ಲಸಿಕೆ ಪಡೆಯಲು ಬಾಕಿ ಇರುವ (ಕೋವಿಶೀಲ್ಡ್ ಲಸಿಕೆ ಪ್ರಥಮ ಡೋಸ್ ಪಡೆದು 84 ದಿವಸ ಪೂರೈಸಿರುವ ಹಾಗೂ ಕೋವ್ಯಾಕ್ಸಿನ್ ಪಡೆದು 28 ದಿನ ಪೂರೈಸಿರುವ) ಎಲ್ಲಾ ಫಲಾನುಭವಿಗಳು ಹಾಗೂ 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಪ್ರಥಮ ಡೋಸ್ ಲಸಿಕೆಯನ್ನು ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.