ಯಲ್ಲಾಪುರ: ಚಂದಗುಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಬೆಳಸೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡಲಾದ ‘ಡಾ.ಬಾಬು ಜಗಜೀವನರಾವ್’ ಸಮುದಾಯ ಭವನವನ್ನು ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಬೆಳಸೂರಿನ ಗ್ರಾಮಸ್ಥರು ಸಚಿವರನ್ನು ಸನ್ಮಾನಿಸಿ ಅಭಿನಂದಿಸಿದರು. ಈ ವೇಳೆ ಪಟ್ಟಣ ಪಂಚಾಯತ ಸದಸ್ಯರಾದ ಪುಷ್ಪಾ ನಾಯ್ಕ, ಮುಖಂಡರಾದ ವಿಜಯ ಮಿರಾಶಿ, ಬಿಜೆಪಿ ಮಂಡಲ ಉಪಾಧ್ಯಕ್ಷ ಶಿರಿಷ್ ಪ್ರಭು, ಸ್ಥಳೀಯ ಪ್ರಮುಖರಾದ ರವಿ ನಾಯ್ಕ, ಗಣೇಶ ಹೆಗಡೆ, ವಿನಾಯಕ ಪೂಜಾರಿ ಹಾಗೂ ಗ್ರಾಮ ಪಂಚಾಯತ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.