Slide
Slide
Slide
previous arrow
next arrow

ಮೇ.26,27ಕ್ಕೆ ಎಂಎಂ ಮಹಾವಿದ್ಯಾಲಯದಲ್ಲಿ ಪುಸ್ತಕ ಪ್ರದರ್ಶನ, ಮಾರಾಟ

300x250 AD

ಶಿರಸಿ: ಎಂಇಎಸ್ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ, ಐಕ್ಯುಎಸಿ ಸಹಯೋಗದೊಂದಿಗೆ ಗ್ರಂಥಾಲಯ ವಿಭಾಗವು ಮೇ.26 ರಂದು ಬೆಳಿಗ್ಗೆ 11 ಗಂಟೆಯಿಂದ ಗ್ರಂಥಾಲಯದಲ್ಲಿ ಎರಡು ದಿನಗಳ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಹಮ್ಮಿಕೊಂಡಿದೆ.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಎಂಇಎಸ್ ಅಧ್ಯಕ್ಷ ಜಿ.ಎಂ. ಹೆಗಡೆ ಮುಳಖಂಡ ವಹಿಸಲಿದ್ದು, ಕಾಲೇಜು ಉಪಸಮಿತಿ ಅಧ್ಯಕ್ಷ ಎಸ್.ಕೆ. ಭಾಗವತ್ ಉದ್ಘಾಟಕರಾಗಿ ಆಗಮಿಸಲಿದ್ದಾರೆ.ರಾಜ್ಯದ,ಜಿಲ್ಲೆಯ ಅನೇಕ ಪುಸ್ತಕ ಮಾರಾಟ ಸಂಸ್ಥೆಗಳು ಪಾಲ್ಗೊಳ್ಳಲಿದ್ದು, ಸಾರ್ವಜನಿಕರಿಗೆ ಖರೀದಿಗೆ‌ ಅವಕಾಶ ನೀಡಲಾಗಿದೆ. ಆಸಕ್ತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕಾಲೇಜಿನ ಪ್ರಾಚಾರ್ಯ ಡಾ.ಟಿ.ಎಸ್. ಹಳೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD

Share This
300x250 AD
300x250 AD
300x250 AD
Back to top