Slide
Slide
Slide
previous arrow
next arrow

ಕಾರಿಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ: ಪ್ರಯಾಣಿಕರಿಗೆ ಗಾಯ

300x250 AD

ಹೊನ್ನಾವರ: ತಾಲೂಕಿನ ಮಂಕಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ VRL ಬಸ್ ಪಲ್ಟಿಯಾಗಿ ಬಸ್ ನಲ್ಲಿ ಇದ್ದ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸಂಭವಿಸಿದೆ.

ಮಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್’ನಲ್ಲಿ ಸುಮಾರು 36 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಮಂಕಿ ಸಮೀಪ ಬಸ್ ಚಾಲಕ ಕಾರ್ ಒಂದಕ್ಕೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದಲ್ಲಿ ಬಸ್ ಪಲ್ಟಿ ಆಗಿದೆ.

300x250 AD

ಅಪಘಾತದಲ್ಲಿ ಗಾಯಗೊಂಡವರನ್ನ ಭಟ್ಕಳ ಮತ್ತು ಹೊನ್ನಾವರ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಘಟನಾ ಸ್ಥಳಕ್ಕೆ ಸ್ಥಳೀಯ ಮಂಕಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ.

Share This
300x250 AD
300x250 AD
300x250 AD
Back to top