ಬೆಂಗಳೂರು: ದೆಹಲಿಯಲ್ಲಿ ಸರಣಿ ಸಭೆಗಳ ನಂತರ ಅಂತೂ 25 ಶಾಸಕರಿಗೆ ಸಚಿವ ಸ್ಥಾನ ಒಲಿದು ಬಂದಿದೆ.
ಇದರ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು, ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಕೆಲ ಶಾಸಕರು ಹೈಕಮಾಂಡ್ ನಡೆಗೆ ತೀವ್ರ ಅಸಮಾಧಾನಗೊಂಡಿದ್ದಾರೆ.
ಇದೀಗ ಸ್ಥಾನ ಕೈ ತಪ್ಪಿದ ಕಾರಣ ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಸಿಟ್ಟಾಗಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.