ಕಾರವಾರ: ನಗರದ ಬಿಣಗಾ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟೆಂಪೋ ಹಾಗೂ ಲಗೇಜ್ ರಿಕ್ಷಾ ಮುಖಾಮುಖಿ ಡಿಕ್ಕಿಯಾಗಿ ರಿಕ್ಷಾ ಚಾಲಕ ಗಾಯಗೊಂಡಿರುವ ಘಟನೆ ನಡೆದಿದೆ.
ಅಂಕೋಲಾದಿಂದ ಕಾರವಾರ ಕಡೆ ಪ್ರಯಾಣಿಕರನ್ನು ಕರೆತರುತ್ತಿದ್ದ ಟೆಂಪೋ ಹಾಗೂ ಅಂಕೋಲಾ ಕಡೆ ತೆರಳುತ್ತಿದ್ದ ಲಗೇಜ್ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಅಪಘಾತದ ರಭಸಕ್ಕೆ ರಿಕ್ಷಾ ಪಲ್ಟಿಯಾಗಿ ಮುಂಭಾಗ ನುಜ್ಜುಗುಜ್ಜಾಗಿದ್ದು, ಘಟನೆಯಲ್ಲಿ ರಿಕ್ಷಾ ಚಾಲಕ ಗಾಯಗೊಂಡಿದ್ದಾನೆ. ತಕ್ಷಣ ಆತನನ್ನು ನಗರದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.ಈ ಘಟನೆ ಬಗ್ಗೆ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.